ಕಾರವಾರ: ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಮೀನುಗಾರನೊಬ್ಬ ಅಸ್ವಸ್ಥಗೊಂಡಿರುವ ಘಟನೆ ಕಾರವಾರದಲ್ಲಿ ನಡೆದಿದೆ.
ಕಾರವಾರದಲ್ಲಿ ನಿಲ್ಲದ ಪ್ರತಿಭಟನೆ.... ಅಸ್ವಸ್ಥಗೊಂಡ ಮೀನುಗಾರ - ವಾಣಿಜ್ಯ ಬಂದರು ವಿಸ್ತರಣೆ ವಿರೋಧ
ಪ್ರತಿಭಟನೆ ವೇಳೆ ಮೀನುಗಾರನೊಬ್ಬ ಅಸ್ವಸ್ಥಗೊಂಡಿರುವ ಘಟನೆ ಕಾರವಾರದಲ್ಲಿ ನಡೆದಿದೆ. ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಮೀನುಗಾರರು ಕಳೆದ ಎಂಟು ದಿನದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ದಿಗಂಬರ್ ಅಸ್ವಸ್ಥಗೊಂಡ ಮೀನುಗಾರ. ಬಿಸಿಲಿನ ತಾಪಕ್ಕೆ ಬಸವಳಿದ ಈತ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದ. ತಕ್ಷಣ ಸ್ಥಳದಲ್ಲಿದ್ದ ಆಂಬ್ಯುಲೆನ್ಸ್ನಲ್ಲಿ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡಿದ್ದಾರೆ.
ಸಾಗರಮಾಲಾ ಯೋಜನೆಯಡಿ ವಾಣಿಜ್ಯ ಬಂದರು ವಿಸ್ತರಣೆ ವಿರೋಧಿಸಿ ಮೀನುಗಾರರು ಕಳೆದ ಎಂಟು ದಿನದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಸಹ ಕರ್ನಾಟಕ ರಾಜ್ಯ ರೈತ ಸಂಘ, ಜಯಕರ್ನಾಟಕ ಸಂಘಟನೆ ಹಾಗೂ ಆಟೋ ಟೆಂಪೊ ಯೂನಿಯನ್ ಕಾರ್ಯಕರ್ತರು ತೆರಳಿ ಬೃಹತ್ ಪ್ರತಿಭಟನೆ ನಡೆಸಿದ್ರು. ಮೀನುಗಾರರಿಗೆ ಸಾತ್ ನೀಡಿದ್ದು, ಯೋಜನೆ ಹಿಂಪಡೆಯುವರೆಗೂ ಹೋರಾಟ ಮುಂದುವರಿಸುವ ಎಚ್ಚರಿಕೆ ನೀಡಿದ್ದಾರೆ.