ಭಟ್ಕಳ:ಮೀನುಗಾರಿಕೆ ತೆರಳಿದ ದೋಣಿಯೊಂದು ಅಲೆಯ ಹೊಡೆತಕ್ಕೆ ಮುಳುಗಡೆಯಾಗಿರುವ ಘಟನೆ ಜಾಲಿಯಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಮೀನುಗಾರ ನಾಪತ್ತೆಯಾಗಿದ್ದಾನೆ. ಇಬ್ಬರು ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.
ದೋಣಿ ಮುಳುಗಡೆಯಾಗಿ ನಾಪತ್ತೆಯಾದ ಮೀನುಗಾರ ನಾಗರಾಜ ರಾಮಕೃಷ್ಣ ಮೊಗೇರ ಜಾಲಿ ನಿವಾಸಿ ಎಂದು ತಿಳಿದು ಬಂದಿದೆ. ರಕ್ಷಣೆಯಾದವರು ವಿಕ್ಟರ್ ರಾಜ ಹಾಗೂ ಪುರುಷೋತ್ತಮ ಮೊಗೇರ ಎಂದು ತಿಳಿದು ಬಂದಿದೆ. ಇಬ್ಬರು ಮುಳುಗಡೆಯಾದ ದೋಣಿಯಿಂದಲೇ ರಕ್ಷಣೆ ಮಾಡಿಕೊಂಡು ದಡ ಸೇರಿದ್ದಾರೆ.