ಶಿರಸಿ:ಇದೇ ಮೊದಲ ಬಾರಿಗೆ ಸಾರ್ವಜನಿಕ ವೇದಿಕೆಯಲ್ಲಿ ಶಿರಸಿ ಪ್ರತ್ಯೇಕ ಜಿಲ್ಲೆ ಕುರಿತು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿದ್ದಾರೆ. ಜಿಲ್ಲೆಯ ರಚನೆಯ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಶಿರಸಿಯಲ್ಲಿ ಮಂಗಳವಾರ ನಡೆದ ಕಾರ್ಮಿಕ ಇಲಾಖೆ ರಾಜ್ಯ ವಿಮಾ ಯೋಜನೆ ಚಿಕಿತ್ಸಾಲಯದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಅವರು, ರಾಜ್ಯದ ವಿವಿಧ ಜಿಲ್ಲೆ ವಿಭಜಿಸಿ ಪ್ರತ್ಯೇಕ ಜಿಲ್ಲೆ ರಚನೆಯಾಗಿದೆ.
ಘಟ್ಟದ ಮೇಲಿನ ತಾಲೂಕುಗಳನ್ನು ಒಳಗೊಂಡ ಶಿರಸಿ ಪ್ರತ್ಯೇಕ ಜಿಲ್ಲೆಯ ಬೇಡಿಕೆಗೆ ಬಲ ಬರುತ್ತಿದೆ. ಈ ಬಗ್ಗೆ ಸಾರ್ವಜನಿಕರು ನನ್ನ ಹಾಗೂ ಸಚಿವ ಶಿವರಾಮ ಹೆಬ್ಬಾರ ಅವರನ್ನು ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ.