ಕರ್ನಾಟಕ

karnataka

ETV Bharat / state

ನಾವು ಒಗ್ಗಟ್ಟಾಗಿದ್ದೇವೆ, ಮುಖ್ಯಮಂತ್ರಿ ಚರ್ಚೆ ಅನಗತ್ಯ: ಮಾಜಿ ಸಚಿವ ದೇಶಪಾಂಡೆ

ರಾಜ್ಯ ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ನಡೆಯುತ್ತಿರುವ ಚರ್ಚೆ ಕುರಿತಂತೆ ಪಕ್ಷದ ಹಿರಿಯ ನಾಯಕ, ಶಾಸಕ ಆರ್.ವಿ.ದೇಶಪಾಂಡೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

By

Published : Jul 1, 2021, 8:50 PM IST

Former Minister RV Deshpande
ಮಾಜಿ ಸಚಿವ ದೇಶಪಾಂಡೆ

ಶಿರಸಿ: ರಾಜ್ಯ ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಚರ್ಚಿಸುವುದು ಸರಿಯಲ್ಲ. ನಾವೆಲ್ಲ ಒಗ್ಗಟ್ಟಾಗಿದ್ದೇವೆ. ಮುಂದೆಯೂ ಒಗ್ಗಟ್ಟಾಗಿ ಹೋಗಬೇಕು ಎಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.

ಶಾಸಕ ಆರ್.ವಿ.ದೇಶಪಾಂಡೆ ಹೇಳಿಕೆ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಊಹಾಪೋಹ ಸೃಷ್ಟಿಸುವ ಕಾರ್ಯ ಸರಿಯಲ್ಲ. ಈ ಕುರಿತು ನಾಯಕರ ನಡುವೆಯೂ ಹೆಚ್ಚಿನ ಚರ್ಚೆಯ ಅಗತ್ಯವಿಲ್ಲ. ನಾನು ಯಾವತ್ತೂ ಮಂತ್ರಿ ಮಾಡಿ ಎಂದು ಹೇಳಿಲ್ಲ. ಅದೇ ರೀತಿ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದಲ್ಲಿಯೂ ಕೂಡ ಈಗಿಂದ ಚರ್ಚೆ ಮಾಡುವುದು ಸರಿಯಲ್ಲ. ಚುನಾವಣೆಗೆ ಇನ್ನೂ ಎರಡು ವರ್ಷಗಳಿದ್ದು, ಅಧಿಕಾರಕ್ಕೆ ಬಂದ ನಂತರ ಎಲ್ಲವೂ ನಿರ್ಧಾರ ಆಗಲಿದೆ ಎಂದರು.

ಸಿಎಂ ಹೇಳಿಕೆ ಹಾಸ್ಯಾಸ್ಪದ:

ಕಾಂಗ್ರೆಸ್ ನಿಯಮಾವಳಿಯಂತೆ ಕೆಲ ಜಿಲ್ಲೆಗಳ ಅಧ್ಯಕ್ಷರ ಸ್ಥಾನ ಬದಲಾವಣೆ ಮಾಡಲು ರಾಜ್ಯಾಧ್ಯಕ್ಷರು ನಿರ್ಣಯಿಸಿದ್ದಾರೆ. ಈ ಬಗ್ಗೆ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದ ದೇಶಪಾಂಡೆ, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ವತಃ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಹೇಳಿಕೆ ನೀಡುವುದು ಹಾಸ್ಯಾಸ್ಪದ ಎಂದರು.

ದೇಶಪಾಂಡೆ ಟೀಕೆ:

ಕಾಂಗ್ರೆಸ್ ಸರ್ಕಾರವಿದ್ದಾಗ ಮಂಜೂರಾದ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ. ಇದೀಗ ಸರಿಯಾಗಿ ಅನುದಾನ ಬಿಡುಗಡೆ ಆಗುತ್ತಿಲ್ಲ. ಇವೆಲ್ಲವನ್ನು ಗಮನಿಸಿದರೆ ಆಡಳಿತದ ವೈಫಲ್ಯ ಕಾಣುತ್ತದೆ ಎಂದು ಟೀಕಿಸಿದರು.

ABOUT THE AUTHOR

...view details