ಕರ್ನಾಟಕ

karnataka

ETV Bharat / state

ಪ್ರತಿಭಾ ಪುರಸ್ಕಾರಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಸಂಚಾರ ಮುಕ್ತಗೊಳಿಸಿದ ಮಾಜಿ ಶಾಸಕ ಮಂಕಾಳ.. ವಿಡಿಯೋ ವೈರಲ್

ವಿದ್ಯಾರ್ಥಿಗಳಿಗೆ ಸಹಾಯ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್​​ ವೈರಲ್​ ಆಗಿದ್ದು, ಜನರು ಮಾಜಿ ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ..

Former MLA Mankala helped students
ವಿದ್ಯಾರ್ಥಿಗಳಿಗೆ ಸಂಚಾರ ಮುಕ್ತಗೊಳಿಸಿ ಸಹಾಯ ಮಾಡಿದ ಶಾಸಕ ಮಂಕಾಳ

By

Published : Oct 22, 2021, 4:06 PM IST

ಭಟ್ಕಳ : ಪ್ರತಿಭಾ ಪುರಸ್ಕಾರಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ವಾಹನ ದಟ್ಟಣೆಯಿಂದ ಸಮಸ್ಯೆ ಆಗಿದ್ದನ್ನು ಗಮನಿಸಿದ ಮಾಜಿ ಶಾಸಕ ಮಂಕಾಳ ಅವರು ಸಂಚಾರ ಮುಕ್ತಗೊಳಿಸಿದ ಘಟನೆ ಅಳ್ವೇಕೋಡಿ ರಸ್ತೆಯಲ್ಲಿ ನಡೆದಿದೆ

ವಿದ್ಯಾರ್ಥಿಗಳಿಗೆ ಸಂಚಾರ ಮುಕ್ತಗೊಳಿಸಿದ ಮಾಜಿ ಶಾಸಕ ಮಂಕಾಳ..

ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಅಳ್ವೇಕೋಡಿಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ಟ್ರಾಫಿಕ್ ಸಮಸ್ಯೆಯಿಂದ ಸಮಾರಂಭಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಿತ್ತು. ಇದನ್ನು ಗಮನಿಸಿದ ಮಾಜಿ ಶಾಸಕ ಮಂಕಾಳ ವೈದ್ಯ ಸಮಯಕ್ಕೆ ಸರಿಯಾಗಿ ಸ್ಪಂದಿಸಿ ಸಹಾಯ ಮಾಡಿದರು.

ವಿದ್ಯಾರ್ಥಿಗಳಿಗೆ ಸಹಾಯ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್​​ ವೈರಲ್​ ಆಗಿದ್ದು, ಜನರು ಮಾಜಿ ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details