ಕಾರವಾರ:ಕರ್ನಾಟಕದಿಂದ ಗೋವಾ ರಾಜ್ಯಕ್ಕೆ ತೆರಳುವ ಬಾಡಿಗೆ ವಾಹನ ಚಾಲಕರಿಗೆ ಆಗುತ್ತಿರುವ ಮಾನಸಿಕ ಕಿರುಕುಳ ತಪ್ಪಿಸುವಂತೆ ರಾಜ್ಯ ಸರ್ಕಾರವನ್ನು ಮಾಜಿ ಶಾಸಕ ಸತೀಶ್ ಸೈಲ್ ಆಗ್ರಹಿಸಿದ್ದಾರೆ.
ಗಡಿ ಭಾಗದಲ್ಲಿ ಟ್ಯಾಕ್ಸಿ ಚಾಲಕರ ಸಮಸ್ಯೆಗಳೇನು?
ಕರ್ನಾಟಕ ಗೋವಾ ಗಡಿಭಾಗವಾದ ಮಾಜಾಳಿ ಚೆಕ್ ಪೋಸ್ಟ್ ಬಳಿ ಟ್ಯಾಕ್ಸಿ ಚಾಲಕರೊಂದಿಗೆ ತೆರಳಿದ ಅವರು, ಕೋವಿಡ್ ಮಹಾಮಾರಿಯಿಂದಾಗಿ ಗೋವಾ ರಾಜ್ಯ ಗಡಿಗಳಲ್ಲಿ ಅಂತರ್ ರಾಜ್ಯ ವಾಹನ ತಿರುಗಾಟಕ್ಕೆ ಅವೈಜ್ಞಾನಿಕವಾಗಿ ನಿರ್ಬಂಧ ವಿಧಿಸಲಾಗಿದೆ. ನಿತ್ಯ ಗೋವಾದೊಂದಿಗೆ ಸಂಪರ್ಕ ಸಾಧಿಸುವ ಕಾರವಾರದ ವಾಹನ ಚಾಲಕರು ಪಡಬಾರದ ಕಷ್ಟ ಪಡುತ್ತಿದ್ದಾರೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ಮುಕ್ತವಾಗಿರುವುದರಿಂದ ಸ್ಥಳೀಯ ಪ್ರಯಾಣಿಕರು ಆರ್ಟಿ-ಪಿಸಿಆರ್ ನೆಗೆಟಿವ್ ರಿಪೋರ್ಟ್ ಪಡೆದುಕೊಂಡು ವಿಮಾನ ನಿಲ್ದಾಣಕ್ಕೆ ಗೋವಾ ಗಡಿ ಮುಖಾಂತರ ಯಾವುದೇ ಅಡೆತಡೆ ಇಲ್ಲದೆ ಪ್ರಯಾಣಿಸಬಹುದು. ಆದರೆ, ಅವರನ್ನು ತಮ್ಮ ಕಾರಿನಲ್ಲಿ ಕರೆದೊಯ್ಯುತ್ತಿರುವ ಸ್ಥಳೀಯ ಚಾಲಕರಿಗೂ ಗೋವಾ ರಾಜ್ಯ ಪ್ರವೇಶಿಸಲು ಆರ್ಟಿ-ಪಿಸಿಆರ್ ರಿಪೋರ್ಟ್ ತೋರಿಸಲು ಗಡಿಯಲ್ಲಿ ಒತ್ತಾಯ ಮಾಡುತ್ತಿದ್ದಾರೆ ಎಂದರು.