ಶಿರಸಿ: ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದ ಆರೋಪಿಯನ್ನು ಪೋಸ್ಕೊ ಪ್ರಕರಣದಡಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ಶಿರಸಿ ತಾಲೂಕಿನಲ್ಲಿ ನಡೆದಿದೆ.
ಅಪ್ರಾಪ್ತೆಯನ್ನ ಪುಸಲಾಯಿಸಿ ಕರೆದೊಯ್ದ ಪ್ರಕರಣ: ಆರೋಪಿಗೆ 14 ದಿನ ನ್ಯಾಯಾಂಗ ಬಂಧನ - Fosco Act Case accused Arrested in sirsi
ಶಿರಸಿ ತಾಲೂಕಿನಲ್ಲಿ ಪೋಸ್ಕೊ ಪ್ರಕರಣ ಅಡಿಯಲ್ಲಿ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಆರೋಪಿ ಸುರೇಂದ್ರ ರಾಜು
ಚಿಕ್ಕಮಗಳೂರು ಜಿಲ್ಲೆಯ ಗೋಣಬೀಡು ಹೋಬಳಿಯ ತಾಟೆಬೈಲಿನ ಸುರೇಂದ್ರ ರಾಜು ಮೊಗೇರ ಬಂಧಿತ ಆರೋಪಿಯಾದ್ದು, ಅಪ್ರಾಪ್ತೆಯ ಕುಟುಂಬದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಗ್ರಾಮೀಣ ಠಾಣೆಯ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.