ಶಿರಸಿ(ಉತ್ತರ ಕನ್ನಡ):ಕಾರು ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಉಂಟಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಭೀಕರ ಅಪಘಾತ ಯಲ್ಲಾಪುರ ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 63 ಬಳಿಯ ಹೊಸಳ್ಳಿ ಗ್ರಾಮದ ಸಮೀಪ ನಡೆದಿದೆ.
ಯಲ್ಲಾಪುರ ಬಳಿ ಕಾರು, ಲಾರಿ ಮಧ್ಯೆ ಡಿಕ್ಕಿ... ಸ್ಥಳದಲ್ಲೇ ನಾಲ್ವರು ಸಾವು - National Highway 63 in Hoshalli Village in Yallapur Taluk
ಕಾರು ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಉಂಟಾದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಉತ್ತರ ಭಾರತದಿಂದ ಪ್ರವಾಸಕ್ಕೆ ಬಂದ ವೇಳೆ ಅಪಘಾತ ಸಂಭವಿಸಿದೆ.
ಕಾರು, ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲಿಯೇ ನಾಲ್ವರು ಸಾವು
ದೆಹಲಿ ಪಾಸಿಂಗ್ ಇರೋ ಕೆಂಪು ಕಾರು ಎದುರಿನಿಂದ ಬರುತ್ತಿರೋ ಲಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತಪಟ್ಟವರಲ್ಲಿ ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರಿದ್ದು, ಉತ್ತರ ಭಾರತದಿಂದ ದಕ್ಷಿಣ ಭಾರತಕ್ಕೆ ಪ್ರವಾಸಕ್ಕೆಂದು ಹೊರಟಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.