ಕಾರವಾರ: ಬೇರೆ ಬೇರೆ ರಾಜ್ಯಗಳಿಂದಜಿಲ್ಲೆಗೆ ವಲಸೆ ಬಂದ ನಾಲ್ವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ.
ಉತ್ತರ ಕನ್ನಡದಲ್ಲಿ ಮತ್ತೆ ಹೆಚ್ಚಿದ ಕೊರೊನಾ ಅಟ್ಟಹಾಸ: ಸೋಂಕಿತರಲ್ಲಿ ವಲಸಿಗರೇ ಅಧಿಕ! - corona news
ಕೊರೊನಾ ಸೋಂಕಿತರೆಲ್ಲರೂ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ನಿಂದ ಆಗಮಿಸಿದವರಾಗಿದ್ದಾರೆ. ಮಹಾರಾಷ್ಟ್ರದಿಂದ ಆಗಮಿಸಿದ ವಲಸಿಗರಲ್ಲಿ ಪ್ರತಿದಿನ ಕೊರೊನಾ ಸೋಂಕು ಪತ್ತೆಯಾಗುತ್ತಿದೆ. ಇದರಿಂದ ಜಿಲ್ಲೆಯ ಜನರು ಆತಂಕಗೊಂಡಿದ್ದಾರೆ.
ಉತ್ತರ ಕನ್ನದಲ್ಲಿ ಕೊರೊನಾ ಅಟ್ಟಹಾಸ
ಸೋಂಕಿತರೆಲ್ಲರೂ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ನಿಂದ ಆಗಮಿಸಿದವರಾಗಿದ್ದಾರೆ. ಮಹಾರಾಷ್ಟ್ರದಿಂದ ಆಗಮಿಸಿದ ವಲಸಿಗರಲ್ಲಿ ಪ್ರತಿದಿನ ಕೊರೊನಾ ಸೋಂಕು ಪತ್ತೆಯಾಗುತ್ತಿದೆ. ಇದರಿಂದ ಜಿಲ್ಲೆಯ ಜನರು ಆತಂಕಗೊಂಡಿದ್ದಾರೆ. ಭಟ್ಕಳಕ್ಕೆ ಸೀಮಿತವಾಗಿದ್ದ ಸೋಂಕು ಇದೀಗ ಹೊನ್ನಾವರ, ಕುಮಟಾ, ಕಾರವಾರ, ಯಲ್ಲಾಪುರ, ಜೋಯಿಡಾ, ಮುಂಡಗೋಡು ಭಾಗಗಳಿಗೆ ಆವರಿಸಿದೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 55 ಸೋಂಕಿತರು ಪತ್ತೆಯಾಗಿದ್ದು, ಅದರಲ್ಲಿ 11 ಜನರು ಗುಣಮುಖರಾಗಿದ್ದಾರೆ. ಉಳಿದ 44 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.