ಕಾರವಾರ: ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳಲ್ಲಿ ನಾಲ್ವರು ನೀರುಪಾಲಾಗಿದ್ದು, ಇಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಕುಮಟಾದ ಕಾಗಲ್ ಕಡಲತೀರದ ಬಳಿ ಇಂದು ನಡೆದಿದೆ. ಇನ್ನಿಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಬೆಂಗಳೂರು ಮೂಲದ ಅರ್ಜುನ್, ಚೈತ್ರಶ್ರೀ ಮೃತದೇಹ ಪತ್ತೆಯಾಗಿದೆ. ತೇಜಸ್, ಕಿರಣ್ಕುಮಾರ್ ಎಂಬಿಬ್ಬರು ವಿದ್ಯಾರ್ಥಿಗಳು ಕಣ್ಮರೆಯಾಗಿದ್ದಾರೆ. ಬೆಂಗಳೂರಿನಿಂದ 87 ವಿದ್ಯಾರ್ಥಿಗಳು ಕುಮಟಾಗೆ ಪ್ರವಾಸಕ್ಕೆ ಬಂದಿದ್ದರು. ಕುಮಟಾದ ಸಿಲ್ವರ್ ಸ್ಯಾಂಡ್ ರೆಸಾರ್ಟ್ನಲ್ಲಿ ಉಳಿದುಕೊಂಡಿದ್ದ ಇವರು ಅಲೆಗಳನ್ನು ಲೆಕ್ಕಿಸದೆ ಸಮುದ್ರದಲ್ಲಿ ಈಜಾಡಲು ಮುಂದಾಗಿದ್ದು, ನಾಲ್ವರು ಕೊಚ್ಚಿ ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.