ಕರ್ನಾಟಕ

karnataka

ETV Bharat / state

ಕುಮಟಾ ಬಳಿ ತುಂಬಿದ ಗ್ಯಾಸ್ ಟ್ಯಾಂಕರ್ ಪಲ್ಟಿ: ಆತಂಕದಲ್ಲಿ ಜನತೆ!

ಮಂಗಳೂರಿನಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ಕುಮಟಾ ತಾಲೂಕಿನ ಹನ್ಮಾವು ಕ್ರಾಸ್ ಬಳಿ ನಡೆದಿದೆ.

Gas tanker overturned in near Uttara kannada
ಕುಮಟಾ ಬಳಿ ತುಂಬಿದ ಗ್ಯಾಸ್ ಟ್ಯಾಂಕರ್ ಪಲ್ಟಿ

By

Published : Jan 25, 2022, 11:10 AM IST

ಕಾರವಾರ: ಗ್ಯಾಸ್ ತುಂಬಿದ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆಯಾಗುತ್ತಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕ ಸೃಷ್ಟಿಯಾಗಿದೆ. ಕುಮಟಾ ತಾಲೂಕಿನ ಹನ್ಮಾವು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಘಟನೆ ನಡೆದಿದೆ.

ಕುಮಟಾ ಬಳಿ ತುಂಬಿದ ಗ್ಯಾಸ್ ಟ್ಯಾಂಕರ್ ಪಲ್ಟಿ..

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಮಂಗಳೂರಿನಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.‌ ಈ ವೇಳೆ, ಪಲ್ಟಿಯಾದ ಟ್ಯಾಂಕರ್​​ನಿಂದ ಅನಿಲ ಸೋರಿಯಾಗುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿದ್ದಾರೆ. ಘಟನೆಯಿಂದ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದ್ದು, ಕೆಲ ಕಾಲ ಸಂಚಾರವನ್ನು ತಡೆ ಹಿಡಿಯಲಾಗಿತ್ತು.

ಇನ್ನು ಗ್ಯಾಸ್ ಸೋರಿಕೆ ಹಿನ್ನೆಲೆ ಸುತ್ತಮುತ್ತಲಿನ ಮನೆಗಳಲ್ಲಿ ಒಲೆ,‌ ಲೈಟ್ ಹಚ್ಚದಂತೆ ಮನವಿ ಮಾಡಲಾಗಿದೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಗ್ಯಾಸ್ ಸೋರಿಕೆ ತಡೆಗೆ ಹರಸಾಹಸ ‌ನಡೆಸುತ್ತಿದ್ದಾರೆ.

ಇದನ್ನೂ ಓದಿ:ವೃದ್ಧ ದಂಪತಿ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು.. ಬೆಚ್ಚಿಬಿದ್ದ ದಾವಣಗೆರೆ ಜನತೆ

For All Latest Updates

ABOUT THE AUTHOR

...view details