ಕಾರವಾರ: ತುಂಬಿದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ಕುಮಟಾ ತಾಲೂಕಿನ ಹಂದಿಗೋಣ ಬಳಿ ನಡೆದಿದೆ.
ಕುಮಟಾ ಬಳಿ ತುಂಬಿದ ಗ್ಯಾಸ್ ಟ್ಯಾಂಕರ್ ಪಲ್ಟಿ... ಆತಂಕದಲ್ಲಿ ಜನ! - ಕುಮಟಾ ಬಳಿ ತುಂಬಿದ ಗ್ಯಾಸ್ ಟ್ಯಾಂಕರ್ ಪಲ್ಟಿ
ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ಕುಮಟಾ ತಾಲೂಕಿನ ಹಂದಿಗೋಣ ಬಳಿ ನಡೆದಿದೆ.
![ಕುಮಟಾ ಬಳಿ ತುಂಬಿದ ಗ್ಯಾಸ್ ಟ್ಯಾಂಕರ್ ಪಲ್ಟಿ... ಆತಂಕದಲ್ಲಿ ಜನ! Gas tanker pulti](https://etvbharatimages.akamaized.net/etvbharat/prod-images/768-512-8943918-85-8943918-1601098368056.jpg)
ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ಇದಾಗಿದ್ದು, ಇಂದು ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗ್ಯಾಸ್ ಟ್ಯಾಂಕರ್ನಿಂದ ಸಣ್ಣ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಸುತ್ತಮುತ್ತಲಿನ ಜನರ ಆತಂಕಕ್ಕೆ ಕಾರಣವಾಗಿದೆ. ಈಗಾಗಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು, ಸುತ್ತಮುತ್ತಲಿನ ಮನೆಯವರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗುತ್ತಿದೆ. ಅಲ್ಲದೆ ಯಾವುದೇ ಕಾರಣಕ್ಕೂ ಬೆಂಕಿ ಉರಿಸದಂತೆ ಸೂಚನೆ ನೀಡಲಾಗಿದೆ.
ಇನ್ನು ಹೆದ್ದಾರಿಗೆ ಅಡ್ಡಲಾಗಿ ಟ್ಯಾಂಕರ್ ಬಿದ್ದ ಪರಿಣಾಮ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.