ಕರ್ನಾಟಕ

karnataka

ETV Bharat / state

ಗೋವಾ ಮದ್ಯ ಅಕ್ರಮ ಸಾಗಾಟ: ಕಾರು ಬಿಟ್ಟು ಪರಾರಿಯಾದ ಚಾಲಕ - ಮದ್ಯ ಸಾಗಾಟ

ಅಕ್ರಮವಾಗಿ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬ, ಪೊಲೀಸರು ತಪಾಸಣೆ ಮಾಡುತ್ತಿರುವುದನ್ನು ಕಂಡು ಕಾರನ್ನು ಬಿಟ್ಟು ಪರಾರಿಯಾಗಿರುವ ಘಟನೆ ಕಾರವಾರದಲ್ಲಿ ನಡೆದಿದೆ. 27 ಪಾಲಿಥಿನ್ ಚೀಲಗಳಲ್ಲಿ 770 ಲೀ. ಗೋವಾ ರಾಜ್ಯದ ಮದ್ಯದ ಬಾಟಲಿಗಳು ಪತ್ತೆಯಾಗಿವೆ.

Goa Liquor Illegal Traffic
ಗೋವಾ ಮದ್ಯ ಸಾಗಾಟ

By

Published : Sep 13, 2022, 5:12 PM IST

Updated : Sep 13, 2022, 5:29 PM IST

ಕಾರವಾರ (ಉತ್ತರಕನ್ನಡ): ಅಕ್ರಮವಾಗಿ ಕಾರಿನಲ್ಲಿ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದ ಆರೋಪಿಯೊಬ್ಬ, ಪೊಲೀಸರು ತಪಾಸಣೆ ಮಾಡುತ್ತಿರುವುದನ್ನು ಕಂಡು ಕಾರನ್ನು ಹೆದ್ದಾರಿಯಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಈ ಘಟನೆ ತಾಲೂಕಿನ ಸದಾಶಿವಗಡದ ಬಳಿ ಸೋಮವಾರ ತಡರಾತ್ರಿ ನಡೆದಿದೆ.

ಕಾರು ಬಿಟ್ಟು ಪರಾರಿಯಾದ ಚಾಲಕ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್​ ಪೆನ್ನೇಕರ್ ಅವರಿಗೆ ಬಂದ ಮಾಹಿತಿಯಂತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್. ಬದರಿನಾಥ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಪೊಲೀಸ್ ವಿಶೇಷ ವಿಭಾಗದ ಪಿಎಸ್ಐ ಪ್ರೇಮನಗೌಡ ಪಾಟೀಲ್, ಹೆಡ್ ಕಾನ್ಸ್​​ಟೇಬಲ್​ ರಾಘವೇಂದ್ರ ಜಿ., ಪೊಲೀಸ್ ಕಾನ್ಸ್‌ಟೇಬಲ್​ಗಳಾದ ಭಗವಾನ ಗಾಂವಕರ, ಸಂತೋಷ್ ಕುಮಾರ್, ಮಹಾದೇವ ಸಿದ್ದಿ ಅವರ ತಂಡ ತಪಾಸಣೆ ನಡೆಸುತ್ತಿತ್ತು.

ಗೋವಾದಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರವಾರದ ಕಡೆಗೆ ಬರುತ್ತಿದ್ದ ಹುಂಡೈ ವೆರ್ನಾ ಕಾರನ್ನ ಪರಿಶೀಲಿಸಲು ಸದಾಶಿವಗಡದ ದೇವಭಾಗ ಕ್ರಾಸ್​ನಲ್ಲಿ ಬ್ಯಾರಿಕೇಡ್ ಹಾಕಿ ಪಹರೆ ನಿಂತಿದ್ದರು. ಇದನ್ನು ಅನತಿ ದೂರದಿಂದಲೇ ಕಂಡು ಭಯಬೀತನಾದ ಚಾಲಕ ಕಾರನ್ನು ಹೆದ್ದಾರಿಯಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಬಳಿಕ ಕಾರನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಸುಮಾರು 1.5 ಲಕ್ಷ ಬೆಲೆಯ 27 ಪಾಲಿಥಿನ್ ಚೀಲಗಳಲ್ಲಿ 770 ಲೀ. ಗೋವಾ ರಾಜ್ಯದ ಮದ್ಯದ ಬಾಟಲಿಗಳು ಪತ್ತೆಯಾಗಿವೆ.

ಗೋವಾ ಮದ್ಯ ಅಕ್ರಮ ಸಾಗಾಟ

ಈ ಬಗ್ಗೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ. ಆರೋಪಿತನ ಪತ್ತೆಗಾಗಿ ಪೊಲೀಸರು ಬಲೆಬೀಸಿದ್ದಾರೆ. ಇನ್ನು ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಅಧಿಕಾರಿ ಹಾಗೂ ಸಿಬ್ಬಂದಿಗೆ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಕಾರವಾರ: ವಾಷಿಂಗ್ ಮಷಿನ್ ನಡುವೆ 2,625ಲೀ ಅಕ್ರಮ ಮದ್ಯ ಸಾಗಾಟ ಪತ್ತೆ

Last Updated : Sep 13, 2022, 5:29 PM IST

ABOUT THE AUTHOR

...view details