ಕಾರವಾರ (ಉತ್ತರಕನ್ನಡ): ಇಲ್ಲಿನ ಮುಂಡಗೋಡ ತಾಲೂಕಿನ ಪಾಳಾ ಗ್ರಾಮ ಪಂಚಾಯತಿನ ಕಾಂಗ್ರೆಸ್ ಬೆಂಬಲಿತ ಸದಸ್ಯೆಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಗಂಡನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆತನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೃತ ಮಹಿಳೆಯನ್ನು ಅಕ್ಕಮ್ಮ ಬಸವರಾಜ ಮೇಲಿನಮನಿ ಎಂದು ಗುರುತಿಸಲಾಗಿದೆ.
ಮನೆಯ ಆವರಣದಲ್ಲಿಯೇ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಈ ಪ್ರಕರಣ ಮಧ್ಯರಾತ್ರಿ ನಡೆದಿರಬಹುದೆಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಸಿಪಿಐ ಸಿದ್ದಪ್ಪ ಸಿಮಾನಿ, ಪಿಎಸ್ಐ ಬಸವರಾಜ ಮಬನೂರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.