ಕಾರವಾರ (ಉ.ಕ): ಕೊರೊನಾ 3ನೇ ಅಲೆ ಆತಂಕದ ಹಿನ್ನೆಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಿದ್ದು, ಇದರಿಂದಾಗಿ ನಿಶ್ಚಿತಾರ್ಥಕ್ಕೆ ಬಂದವರು ಗಡಿ ದಾಟಲಾಗದೆ ಪರದಾಡಿದ ಘಟನೆ ಕರ್ನಾಟಕ-ಗೋವಾ ಗಡಿಭಾಗವಾದ ಮಾಜಾಳಿಯಲ್ಲಿ ನಡೆದಿದೆ.
ಕಾರವಾರದ ಯುವತಿಗೆ ಗೋವಾ ಮೂಲದ ಯುವಕನೊಂದಿಗೆ ನಿಶ್ಚಿತಾರ್ಥ ನಡೆಯಬೇಕಾಗಿತ್ತು. ತಾಲೂಕಿನ ಮಾಜಾಳಿ ಗಡಿಯಲ್ಲಿ ಗೋವಾದಿಂದ ನಿಶ್ಚಿತಾರ್ಥಕ್ಕೆಂದು ಕಾರವಾರಕ್ಕೆ ಬರುತ್ತಿದ್ದ ವರನ ಕಡೆಯವರನ್ನ ಮಾಜಾಳಿ ಚೆಕ್ಪೋಸ್ಟ್ನಲ್ಲಿ ತಡೆಯಲಾಗಿತ್ತು.
ಕೊರೊನಾ ಹಿನ್ನೆಲೆ ಆರ್‌ಟಿಪಿಸಿಆರ್ ಪ್ರಮಾಣಪತ್ರ ಕೇಳಿದ್ದು ಯಾರ ಬಳಿಯೂ ಇರಲಿಲ್ಲ. ಈ ಕಾರಣದಿಂದ ರಾಜ್ಯ ಪ್ರವೇಶಕ್ಕೆ ನಿರಾಕರಿಸಲಾಯಿತು. ಕೊರೊನಾ 3ನೇ ಅಲೆ ಆತಂಕದಿಂದಾಗಿ ಮಹಾರಾಷ್ಟ್ರ ಹಾಗೂ ಕೇರಳದಿಂದ ಆಗಮಿಸುವವರಿಗೆ ಆರ್‌ಟಿಪಿಸಿಆರ್ ಕಡ್ಡಾಯಗೊಳಿಸಲಾಗಿದ್ದು, ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದೆ.