ಶಿರಸಿ:ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ತಂಗುಂಡಿಯ ಸುರೇಶ ಪರಮೇಶ್ವರ ಹೆಗಡೆ (53) ಬಂಧಿತ ಆರೋಪಿ. ಈತ ಹಲವು ದಿನಗಳಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.
ಶಿರಸಿ: ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯ ಶಿಕ್ಷಕನ ಬಂಧನ
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಗಂಭೀರ ಆರೋಪದ ಮೇಲೆ ಶಿರಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೊಂದರ ಮುಖ್ಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.
ಸುರೇಶ ಪರಮೇಶ್ವರ ಹೆಗಡೆ
ವಿದ್ಯಾರ್ಥಿನಿಯ ಪಾಲಕರು ಶಿಕ್ಷಕನ ವಿರುದ್ಧ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಇದನ್ನೂ ಓದಿ:ಮೂರು ದಿನ ಮಾಧ್ಯಮಗಳ ಜೊತೆ ಮಾತನಾಡಲ್ಲ ಎಂದ ಸಚಿವ ಈಶ್ವರಪ್ಪ