ಕಾರವಾರ: ಕೋವಿಡ್ ಸೋಂಕು ನಿಯಂತ್ರಣಕ್ಕೆ ಮುಂದಾಗಿರುವ ಉತ್ತರ ಕನ್ನಡ ಜಿಲ್ಲಾಡಳಿತ ವಾರದಲ್ಲಿ 2 ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದೆ. ಹಾಗಾಗಿ, ಇಂದು ಮಾರುಕಟ್ಟೆಗಳಲ್ಲಿ ಜನಸ್ತೋಮ ಕಂಡುಬಂತು.
ಮಂಗಳವಾರ ಮತ್ತು ಶುಕ್ರವಾರ ಮಾತ್ರ ಮಾರುಕಟ್ಟೆಗೆ ಬಂದು ಅಗತ್ಯ ವಸ್ತುಗಳ ಖರೀದಿಸಬಹುದು. ಹೀಗಾಗಿ, ಕಾರವಾರ ನಗರದಲ್ಲಿ ಬೆಳಗ್ಗೆ 6 ಗಂಟೆಯಿಂದಲೇ ಜನ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದರು. ತಳ್ಳುಗಾಡಿಗಳ ಮೂಲಕ ಮನೆ ಬಾಗಿಲಿಗೆ ತರಕಾರಿ, ಹಣ್ಣು ಇತರೆ ಸಾಮಗ್ರಿಗಳನ್ನು ಕೊಂಡೊಯ್ದು ಮಾರಾಟ ಮಾಡಲು ಪಾಸ್ ಹೊಂದಿದವರಿಗೆ ಅವಕಾಶವಿದೆ.