ಕಾರವಾರ:ಕಳೆದ ಮೂರ್ನಾಲ್ಕು ದಿನಗಳಿಂದ ಮಾಯವಾಗಿದ್ದ ಮಳೆ ಅಬ್ಬರ ಕರಾವಳಿಯಲ್ಲಿ ಮತ್ತೆ ಜೋರಾಗಿದ್ದು, ಇಂದು ಬೆಳಗ್ಗೆಯಿಂದಲೇ ಧಾರಾಕಾರವಾಗಿ ಮಳೆ ಸುರಿಯಲಾರಂಭಿಸಿದೆ.
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಅಬ್ಬರ: ಇನ್ನೂ ಮೂರ್ನಾಲ್ಕು ದಿನ ವರ್ಷಧಾರೆ ಸಾಧ್ಯತೆ! - Uttara kannada rain news
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಕುಮಟಾ, ಹೊನ್ನಾವರ ಭಾಗಗಳಲ್ಲಿ ಮಳೆ ಜೋರಾಗಿದ್ದು, ಘಟ್ಟದ ಮೇಲ್ಭಾಗದ ತಾಲೂಕುಗಳಲ್ಲಿ ಕೊಂಚ ಕಡಿಮೆಯಿದೆ. ಕರಾವಳಿ ತಾಲೂಕುಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳವರೆಗೆ ಮಳೆ ಮುಂದುವರೆಯುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ ಜಿಲ್ಲಾ ಕೇಂದ್ರ ಕಾರವಾರದಲ್ಲಿ ಇಂದು ಬೆಳಗ್ಗೆಯಿಂದಲೇ ಮಳೆ ಸುರಿಯಲಾರಂಭಿಸಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಆಗಾಗ ಸುರಿಯುತ್ತಿದ್ದ ಮಳೆ ಇಂದು ಧಾರಾಕಾರವಾಗಿ ಸುರಿಯುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತವಾಗಿದೆ.
ಜಿಲ್ಲೆಯ ಅಂಕೋಲಾ, ಕುಮಟಾ, ಹೊನ್ನಾವರ ಭಾಗಗಳಲ್ಲಿ ಮಳೆ ಜೋರಾಗಿದ್ದು, ಘಟ್ಟದ ಮೇಲ್ಭಾಗದ ತಾಲೂಕುಗಳಲ್ಲಿ ಕೊಂಚ ಕಡಿಮೆಯಿದೆ. ಕರಾವಳಿ ತಾಲೂಕುಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳವರೆಗೆ ಮಳೆ ಮುಂದುವರೆಯುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.