ಕಾರವಾರ:ಉತ್ತರಕನ್ನಡ ಜಿಲ್ಲೆಯಾದ್ಯಂತ ವರುಣನ ಆರ್ಭಟ ಜೋರಾಗಿದೆ. ಇಂದು ದಿನವಿಡಿ ಎಲ್ಲೆಡೆ ಧಾರಾಕಾರವಾಗಿ ಮಳೆ ಸುರಿದಿದೆ.
ಉತ್ತರಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ... ಕಾರವಾರದಲ್ಲಿ ತಗ್ಗು ಪ್ರದೇಶಗಳು ಜಲಾವೃತ - ಉತ್ತರ ಕನ್ನಡ ಮಳೆಯ ಪ್ರಮಾಣ
ಮಲೆನಾಡು ಕರಾವಳಿ ಮಿಶ್ರಿತ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಇಂದು ಭಾರೀ ಮಳೆಯಾಗಿದೆ. ಜಿಲ್ಲಾ ಕೇಂದ್ರ ಕಾರವಾರದ ಕೆಲ ತಗ್ಗು ಪ್ರದೇಶಗಳು ಜಲಾವೃತವಾಗಿವೆ.
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ
ಜಿಲ್ಲೆಯ ಕರಾವಳಿ ತಾಲುಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಮಲೆನಾಡಿನ ಶಿರಸಿ, ಸಿದ್ದಾಪುರ, ಯಲ್ಲಾಪುರ ಭಾಗಗಳಲ್ಲಿ ಬೆಳಗ್ಗೆಯಿಂದಲೇ ಮಳೆಯಾಗುತ್ತಿದೆ. ಕಾರವಾರದ ಕೆಲ ತಗ್ಗು ಪ್ರದೇಶಗಳು ಮಳೆ ನೀರಿನಿಂದ ಜಲಾವೃತವಾಗಿವೆ.
ಮಳೆಯ ಅಬ್ಬರ ಇನ್ನೂ ನಾಲ್ಕು ದಿನಗಳವರೆಗೆ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದ್ದು, ಕರಾವಳಿ ಭಾಗಗಳಲ್ಲಿ ಆತಂಕ ಶುರುವಾಗಿದೆ.