ಕಾರವಾರ: ವಾರಗಳ ಕಾಲ ಪ್ರವಾಹ ಸೃಷ್ಟಿಸಿ ತಣ್ಣಗಾಗಿದ್ದ ಮಳೆ ಮತ್ತೆ ಜೋರಾಗಿದ್ದು, ಮಳೆಯ ರಭಸಕ್ಕೆ ಕಾರವಾರ ಜಿಲ್ಲಾಸ್ಪತ್ರೆಗೆ ನೀರು ನುಗ್ಗಿ ರೋಗಿಗಳು ಹಾಗೂ ಸಿಬ್ಬಂದಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಹೌದು, ಮತ್ತೆ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲಾಸ್ಪತ್ರೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದ್ದು, ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರಕ್ಕೆ ನೀರು ನುಗ್ಗಿದೆ. ಒಂದು ಅಡಿಯಷ್ಟು ನೀರು ತುಂಬಿಕೊಂಡ ಕಾರಣ ರೋಗಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ಪರದಾಡುವಂತಾಗಿದೆ. ವೈದ್ಯಕೀಯ ಮಹಾವಿದ್ಯಾಲಯದ ಕಟ್ಟಡದ ಕಾಮಗಾರಿ ವೇಳೆ ಆಸ್ಪತ್ರೆಯಿಂದ ಹೊರ ಹೋಗುವ ನೀರನ್ನು ಬ್ಲಾಕ್ ಮಾಡಿದ್ದರಿಂದ ಈ ರೀತಿಯ ಸಮಸ್ಯೆ ಎದುರಾಗಿದೆ. ಡಯಾಲಿಸಿಸ್ ಕೇಂದ್ರದಲ್ಲಿ ಸುಮಾರು 12 ಬೆಡ್ಗಳಿದ್ದು, ಲಕ್ಷಾಂತರ ರೂ. ಮೌಲ್ಯದ ಯಂತ್ರೋಪಕರಣಗಳು ಹಾನಿಯಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.