ಕರ್ನಾಟಕ

karnataka

ETV Bharat / state

ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ‌ ಆರ್ಭಟ, ಜನಜೀವನ ಅಸ್ತವ್ಯಸ್ಥ - rain news

ಉತ್ತರಕನ್ನಡ ಜಿಲ್ಲೆಯ ವಿವಿಧೆಡೆ ಭಾರಿ ಮಳೆ ಆಗುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದೆ. ಪರಿಣಾಮ ಜನಜೀವನಕ್ಕೆ ತೊಂದರೆಯಾಗಿದೆ.

Heavy rain in Uttara Kannada district
ಉತ್ತರಕನ್ನಡದಲ್ಲಿ ವರುಣನ‌ ಆರ್ಭಟ

By

Published : Jul 9, 2020, 11:59 AM IST

ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ ವರ್ಷಧಾರೆ ಜೋರಾಗಿದೆ. ಇಲ್ಲಿನ ಹಲವು ಪ್ರದೇಶಗಳು ಜಲಾವೃತಗೊಂಡು ಜನಜೀವನಕ್ಕೆ ಸಮಸ್ಯೆಯಾಗಿದೆ.

ಉತ್ತರಕನ್ನಡದಲ್ಲಿ ವರುಣನ‌ ಆರ್ಭಟ

ತಾಲೂಕಿನ ಅಮದಳ್ಳಿ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಐಆರ್​​ಬಿ ಕಂಪನಿಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಮಳೆ ನೀರು ಉಕ್ಕಿ ಹರಿಯುತ್ತಿದೆ. ಹೆದ್ದಾರಿಯಲ್ಲಿ ಎದೆಮಟ್ಟ ನೀರು ತುಂಬಿ ಹರಿಯುತ್ತಿದೆ. ಇದರಿಂದ ಎರಡು ಬದಿಯ ವಾಹನಗಳು ಸಂಚರಿಸಲು ಸಾಧ್ಯವಾಗದೇ ಸಾಲುಗಟ್ಟಿ ನಿಂತಿವೆ.

ಅಮದಳ್ಳಿ, ಚೆಂಡಿಯಾ ಹಾಗೂ ಮುದಗಾದ ಮೇಲಿನಕೇರಿ ಬಳಿ ಹತ್ತಾರು ಮನೆಗಳಿಗೆ ನೀರು ನುಗ್ಗಿದೆ. ಇಲ್ಲಿನ ನಿವಾಸಿಗಳು ಸುರಕ್ಷಿತ ಪ್ರದೇಶಗಳಿಗೆ ತೆರಳಲು ಹರಸಾಹಸ ಪಡುತ್ತಿದ್ದಾರೆ. ಇದಲ್ಲದೇ ಜಿಲ್ಲೆಯ ಕರಾವಳಿ ತಾಲೂಕುಗಳು ಹಾಗೂ ಘಟ್ಟದ ಮೇಲ್ಭಾಗದಲ್ಲಿಯೂ ಜೋರು ಮಳೆಯಾಗುತ್ತಿದೆ.

ABOUT THE AUTHOR

...view details