ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 3 ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಮಳೆಯ ಪ್ರಕೋಪಕ್ಕೆ ಹಳ್ಳ, ಕೊಳ್ಳಗಳು, ನದಿಗಳು ತುಂಬಿ ಹರಿಯುತ್ತಿವೆ.
ಉತ್ತರ ಕನ್ನಡದಲ್ಲಿ ಕಳೆದ 3 ದಿನಗಳಿಂದ ಭಾರಿ ಮಳೆ: ಕೃಷಿ ಭೂಮಿ ಸಂಪೂರ್ಣ ಜಲಾವೃತ
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 3 ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಜಿಲ್ಲೆಯ ಸಿದ್ದಾಪುರದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ಉಕ್ಕಿ ಹರಿಯುತ್ತಿರುವ ಹಳ್ಳ ಕೊಳ್ಳದಿಂದ ಕೃಷಿ ಭೂಮಿ ಸಂಪೂರ್ಣ ಜಲಾವೃತವಾಗಿದೆ.
ಜಿಲ್ಲೆಯ ಸಿದ್ದಾಪುರದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ಉಕ್ಕಿ ಹರಿಯುತ್ತಿರುವ ಹಳ್ಳ ಕೊಳ್ಳದಿಂದ ಕೃಷಿ ಭೂಮಿ ಸಂಪೂರ್ಣ ಜಲಾವೃತವಾಗಿದೆ. ಸಿದ್ದಾಪುರದ ಆರೆಂದೂರು ಸಮೀಪದ ದೊಡ್ಡ ಹಳ್ಳವೊಂದು ತುಂಬಿ ಹರಿಯುತ್ತಿದ್ದು, ಅರೆಂದೂರು, ಗೋಳಗೋಡು ಹಾಗೂ ಕಲ್ಯಾಣಪುರ ಭಾಗದ ರೈತರ ಕೃಷಿ ಭೂಮಿ ನೀರಿನಲ್ಲಿ ಮುಳುಗಡೆಯಾಗಿದೆ. ಸುಮಾರು 200 - 250 ಎಕರೆ ಪ್ರದೇಶ ಸಂಪೂರ್ಣ ಮುಳುಗಡೆಯಾಗಿದೆ. ಆ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ಹಾಗೂ ಕಬ್ಬಿನ ಬೆಳೆ ಸಂಪೂರ್ಣ ನೀರಿನಲ್ಲಿ ಮುಳುಗಿದೆ.
ಇನ್ನು ಸಿದ್ದಾಪುರದ ನೆಜ್ಜೂರು, ಶಿರಳಗಿ ಭಾಗಗಳಲ್ಲಿ ಸುಮಾರು 200 ಎಕರೆ ಕೃಷಿ ಪ್ರದೇಶ ಜಲಾವೃತವಾಗಿದೆ. ಸಿದ್ದಾಪುರದ ತ್ಯಾರ್ಸಿ ಬಳಿ ಕೂಡ ಈಗ ತಾನೆ ಭತ್ತದ ನಾಟಿ ಕಾರ್ಯ ಮುಗಿದಿದ್ದು, ಹಳ್ಳದ ನೀರು ಗದ್ದೆಗೆ ನುಗ್ಗಿದೆ. ಜೊತೆಗೆ ಹಲವೆಡೆ ಮರಗಳು ಬಿದ್ದು ಸಂಚಾರಕ್ಕೆ ಅಡಚಣೆಯಾಗಿದ್ದು, ವಿದ್ಯುತ್ ವ್ಯತ್ಯಯವೂ ಆಗಿದೆ.