ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನದಿಂದ ಭಾರಿ ಮಳೆಯಾಗುತ್ತಿದೆ. ರಾತ್ರಿ ಸುರಿದ ಗಾಳಿ ಸಹಿತ ಜೋರು ಮಳೆಗೆ ಮುಂಡಗೋಡು, ಕುಮಟಾ ಭಾಗದಲ್ಲಿ ಮರ, ವಿದ್ಯುತ್ ಕಂಬಗಳು ಧರೆಗುರುಳಿವೆ. ಮನೆಗಳ ಚಾವಣಿ ಹಾರಿ ಹೋಗಿದ್ದು ಭಾರಿ ನಷ್ಟ ಉಂಟಾಗಿದೆ.
ಮುಂಡಗೋಡು ತಾಲೂಕಿನ ತೆಂಗಿನಕೊಪ್ಪ ಗ್ರಾಮದಲ್ಲಿ ಎರಡು ಮನೆಯ ಚಾವಣಿ ಹಾರಿ ಹೋಗಿದೆ. ಚವಡಳ್ಳಿಯಲ್ಲಿ ನಾಲ್ಕು ಮನೆಗಳ ಮೇಲೆ ಮರ ಬಿದ್ದಿದೆ. ಭಾರಿ ಮಳೆಗೆ ಇಲ್ಲಿನ ಅಂಧ ಮಕ್ಕಳ ವಸತಿ ನಿಲಯದ ಚಾವಣಿ, ಗೋಡೆ, ಬ್ಯಾಂಕಿನ ಗೋಡೆ ಕುಸಿದು ಬಿದ್ದಿದೆ. ಕುಮಟಾದಲ್ಲಿಯೂ 3 ಮನೆಗಳ ಮೇಲೆ ಮರ ಬಿದ್ದು ಹಾನಿಯಾಗಿದ್ದು, ಸುಮಾರು 12 ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.