ಕರ್ನಾಟಕ

karnataka

ETV Bharat / state

ಉತ್ತರ ಕನ್ನಡದಲ್ಲಿ ಧಾರಾಕಾರ ಮಳೆ : ಜಲಾಶಯಗಳಲ್ಲಿ ಕಟ್ಟೆಚ್ಚರಕ್ಕೆ ಸೂಚನೆ - Instructions

ಉತ್ತರಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಆಗುತ್ತಿದೆ. ಅತ್ತ ಹವಾಮಾನ ಇಲಾಖೆ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಜಲಾಶಯಗಳಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟದಲ್ಲಿ ಸಂಗ್ರಹಿಸದಂತೆ ಸೂಚಿಸಲಾಗಿದೆಯೆಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ತಿಳಿಸಿದರು.

ಡಾ.ಕೆ.ಹರೀಶಕುಮಾರ್

By

Published : Sep 4, 2019, 8:47 PM IST

ಕಾರವಾರ:ಉತ್ತರಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹವಮಾನ ಇಲಾಖೆ ಇನ್ನೂ ಮೂರು ದಿನ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಜಲಾಶಯಗಳಲ್ಲಿ ನೀರಿನ ಮಟ್ಟವನ್ನು ಗರಿಷ್ಠ ಮಟ್ಟದಲ್ಲಿ ಸಂಗ್ರಹ ಮಾಡದಂತೆ ಸೂಚಿಸಲಾಗಿದೆಯೆಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಹೇಳಿದರು.

ಜಲಾಶಯಗಳಲ್ಲಿ ಗರಿಷ್ಠ ಮಟ್ಟದಲ್ಲಿ ನಿರನ್ನು ಶೇಖರಿಸದಂತೆ ಸೂಚನೆ

ಮಾಧ್ಯಮದವರೊಂದಿಗೆ ಮಾತನಾಡಿದ ಡಾ.ಕೆ.ಹರೀಶಕುಮಾರ್ ಹವಮಾನ ಇಲಾಖೆ ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ. ಈ ಕಾರಣದಿಂದ ಜಿಲ್ಲೆಯ ಸೂಪಾ, ಕದ್ರಾ ಸೇರಿದಂತೆ ಎಲ್ಲ ಜಲಾಶಯಗಳ ನೀರನ್ನು ಗರಿಷ್ಠ ಮಟ್ಟದಲ್ಲಿ ಸಂಗ್ರಹಿಸದಂತೆ ಹಂತ ಹಂತವಾಗಿ ನೀರು ಹೊರ ಬಿಡಲಾಗುತ್ತಿದೆ. ಎಷ್ಟೇ ಮಳೆ ಬಂದರೂ ನೀರನ್ನು ಶೇಖರಿಸಿಕೊಳ್ಳುವಷ್ಟು ಸಾಮರ್ಥ್ಯ ಹೊಂದಿವೆ. ಮಳೆ ಹೆಚ್ಚಾಗಿ ಜಲಾಶಯಗಳಿಂದ ಹೊರ ಬಿಡುವ ನೀರಿನಿಂದ ಕೃತಕ ಪ್ರವಾಹ ಉಂಟಾಗುವ ಸಾಧ್ಯತೆ ಇರುವುದರಿಂದ, ಎಲ್ಲ ಜಲಾಶಯಗಳಲ್ಲಿ ನೀರಿನ ಮಟ್ಟವನ್ನು ಅತ್ಯಂತ ಹೊಂದಾಣಿಕೆ ಮಟ್ಟದಲ್ಲಿ ಇಟ್ಟುಕೊಳ್ಳಲಾಗಿದೆಯೆಂದು ತಿಳಿಸಿದರು.

ಜಿಲ್ಲೆಯ ಯಾವುದೇ ನದಿಗಳು ಸದ್ಯ ಅಪಾಯದ ಮಟ್ಟದಲ್ಲಿ ಹರಿಯುತ್ತಿಲ್ಲ. ಜಲಾಶಯಗಳಿಂದ ನೀರು ಬಿಡುವ ಸಮಯದಲ್ಲಿ ಜನರಿಗೆ ಮುನ್ಸೂಚನೆ ನೀಡಲಾಗುತ್ತದೆ. ಅವರನ್ನು ಬೇರೆಡೆ ಸ್ಥಳಾಂತರಿಸುವ ವ್ಯವಸ್ಥೆಯೂ ನಮ್ಮಲ್ಲಿದೆ. ಜನರು ಈ ಬಗ್ಗೆ ಯಾವುದೇ ಆತಂಕ ಪಡಬೇಕಿಲ್ಲ ಎಂದು ಇದೇ ವೇಳೆ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

ABOUT THE AUTHOR

...view details