ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ಕೂಡ ಮಳೆ ಅಬ್ಬರ ಮುಂದುವರಿದಿದ್ದು, ಕರಾವಳಿಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಜಿಲ್ಲೆಯ ಕರಾವಳಿ ಹಾಗೂ ಮಲೆನಾಡು ತಾಲೂಕುಗಳಲ್ಲಿ ಕಳೆದ ಎರಡು ದಿನದಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಇಂದು ಕೂಡ ಮುಂದುವರಿದಿದೆ.
ಉತ್ತರಕನ್ನಡದಲ್ಲಿ ಮಳೆ ಅಬ್ಬರ: ಆರೆಂಜ್ ಅಲರ್ಟ್ ಘೋಷಣೆ - ಉತ್ತರಕನ್ನಡ ಆರೆಂಜ್ ಅಲರ್ಟ್ ಘೋಷಣೆ
ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಹಾಗೂ ಘಟ್ಟದ ಮೇಲ್ಬಾಗದ ಶಿರಸಿ, ಸಿದ್ದಾಪುರ, ಯಲ್ಲಾಪುರದಲ್ಲೂ ಬಿಟ್ಟು ಬಿಟ್ಟು ಭಾರಿ ಮಳೆಯಾಗಿದೆ. ಜುಲೈ 16ರವರೆಗೂ ಮಳೆಯ ಮುನ್ನೆಚ್ಚರಿಕೆ ನೀಡಿರುವ ಹವಾಮಾನ ಇಲಾಖೆ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಮುಂದುವರಿದಿರುವುದಾಗಿ ತಿಳಿಸಿದೆ.

ವರುಣನ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾದಂತಾಗಿದೆ. ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಹಾಗೂ ಘಟ್ಟದ ಮೇಲ್ಭಾಗದ ಶಿರಸಿ, ಸಿದ್ದಾಪುರ, ಯಲ್ಲಾಪುರದಲ್ಲೂ ಭಾರಿ ಮಳೆಯಾಗಿದೆ. ಜಿಲ್ಲೆಯಲ್ಲಿ ಜುಲೈ 16ರವರೆಗೂ ಮಳೆಯ ಮುನ್ನೆಚ್ಚರಿಕೆ ನೀಡಿರುವ ಹವಾಮಾನ ಇಲಾಖೆ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಮುಂದುವರಿದಿರುವುದಾಗಿ ತಿಳಿಸಿದೆ.
ಅಲ್ಲದೆ ಭಾರಿ ಮಳೆಯಿರುವ ಹಿನ್ನೆಲೆಯಲ್ಲಿ ಮೀನುಗಾರರಿಗೆ ಕಡಲಿಗೆ ತೆರಳದಂತೆ ಜಿಲ್ಲಾಡಳಿತದಿಂದ ಸೂಚನೆ ನೀಡಲಾಗಿದೆ. ಇದರಿಂದ ಸಾಂಪ್ರದಾಯಿಕ ಮೀನುಗಾರಿಕೆ ಕೂಡ ಸ್ಥಗಿತಗೊಂಡಿದೆ. ಸಮುದ್ರದ ಅಲೆಗಳ ಅಬ್ಬರ ಕೂಡ ಜೋರಾಗಿದ್ದು, ಕಡಲತೀರಗಳಿಗೂ ಜನರಿಗೆ ತೆರಳದಂತೆ ಸೂಚನೆ ನೀಡಲಾಗಿದೆ.