ಕಾರವಾರ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಉತ್ತರಕನ್ನಡ ಜಿಲ್ಲೆಯಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡದಲ್ಲಿ ಗುಡುಗು ಸಿಡಿಲು ಸಹಿತ ಮಳೆ
ಜಿಲ್ಲೆಯ ಘಟ್ಟದ ಮೇಲ್ಬಾಗ ಹಾಗೂ ಕರಾವಳಿಯ ಬಹುತೇಕ ಎಲ್ಲ ತಾಲೂಕುಗಳಲ್ಲಿಯೂ ಸಾಧಾರಣ ಮಳೆಯಾಗಿದೆ. ಅಲ್ಲದೆ ಗುಡುಗು ಸಿಡಿಲಿನ ಅಬ್ಬರ ಜೋರಾಗಿದ್ದು, ಕಡಲತೀರದಲ್ಲಿ ಅಲೆಗಳ ಅಬ್ಬರ ಕೂಡ ಜೋರಾಗಿದೆ.
ಹವಮಾನ ಇಲಾಖೆ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿಯೂ ಸಂಜೆ ಹೊತ್ತಿಗೆ ಮಳೆಯಾಗಿದೆ.
ಜಿಲ್ಲೆಯ ಘಟ್ಟದ ಮೇಲ್ಬಾಗ ಹಾಗೂ ಕರಾವಳಿಯ ಬಹುತೇಕ ಎಲ್ಲ ತಾಲ್ಲೂಕುಗಳಲ್ಲಿಯೂ ಸಾಧಾರಣ ಮಳೆಯಾಗಿದೆ. ಅಲ್ಲದೆ ಗುಡುಗು ಸಿಡಿಲಿನ ಅಬ್ಬರ ಜೋರಾಗಿದ್ದು, ಕಡಲತೀರದಲ್ಲಿ ಅಲೆಗಳ ಅಬ್ಬರ ಕೂಡ ಜೋರಾಗಿದೆ. ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮೀನುಗಾರಿಕೆಯಲ್ಲಿ ತೊಡಗಿಕೊಂಡ ರಾಜ್ಯ ಹಾಗೂ ಹೊರ ರಾಜ್ಯದ ಬೋಟ್ ಗಳು ಹತ್ತಿರದ ಬಂದರುಗಳಿಗೆ ವಾಪಸ್ ಆಗುತ್ತಿದ್ದು, ಕಾರವಾರದ ಕಡಲತೀರದ ಬಳಿಯೂ ಸಾಕಷ್ಟು ಬೋಟ್ ಗಳು ಲಂಗರು ಹಾಕಿವೆ.