ಕಾರವಾರ (ಉ.ಕ):ಉತ್ತರಕನ್ನಡ ಜಿಲ್ಲೆಯ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ನದಿಗಳು ಉಕ್ಕಿ ಹರಿಯತೊಡಗಿವೆ.
ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿದ್ದ ಮಳೆ ಕರಾವಳಿಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಕೊಂಚ ಕಡಿಮೆಯಾಗಿತ್ತು. ಆದರೆ, ಇಂದು ಬೆಳಗ್ಗೆಯಿಂದಲೇ ಮತ್ತೆ ಜೋರಾಗಿದ್ದು, ಸಂಪೂರ್ಣ ಮೋಡ ಕವಿದ ವಾತಾವರಣ ಕಂಡು ಬರುತ್ತಿದೆ.