ಕಾರವಾರ: ಭಾರಿ ಮಳೆಗೆ ಅರೆಬೈಲ್ ಘಟ್ಟದಲ್ಲಿ ಗುಡ್ಡ ಕುಸಿದು ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ವಾಹನ ಸಂಚಾರಕ್ಕೆ ಕೆಲ ಕಾಲ ಅಡಚಣೆ ಉಂಟಾಗಿತ್ತು.
ಉತ್ತರ ಕನ್ನಡದ ಅರೆಬೈಲ್ ಘಟ್ಟದಲ್ಲಿ ಗುಡ್ಡ ಕುಸಿತ: ಯಲ್ಲಾಪುರ-ಅಂಕೋಲಾ ಸಂಚಾರಕ್ಕೆ ಅಡ್ಡಿ - ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಗುಡ್ಡದ ಮಣ್ಣು ಕುಸಿತ
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಯಲ್ಲಾಪುರ - ಅಂಕೋಲಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಗುಡ್ಡದ ಮಣ್ಣು ಕುಸಿದಿದೆ.
ಅರೆಬೈಲ್ ಘಟ್ಟದಲ್ಲಿ ಕುಸಿದ ಗುಡ್ಡ
ಯಲ್ಲಾಪುರ - ಅಂಕೋಲಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಗುಡ್ಡದ ಮಣ್ಣು ಕುಸಿದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಆದರೆ, ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡ ಕಾರಣ ನೂರಾರು ವಾಹನಗಳು ರಸ್ತೆಯ ಎರಡು ಬದಿ ಕಳೆದ ಅರ್ಧಗಂಟೆಯಿಂದ ಸಾಲುಗಟ್ಟಿ ನಿಂತಿದ್ದವು. ನಂತರ ಸ್ಥಳಕ್ಕಾಗಮಿಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಕೆಲವೆಡೆ ನೆರೆ ಸೃಷ್ಟಿಯಾಗಿ ಸಾಕಷ್ಟು ಹಾನಿ ಸಂಭವಿಸಿದೆ.
Last Updated : Jul 23, 2021, 9:05 AM IST