ಕರ್ನಾಟಕ

karnataka

By

Published : Jul 16, 2021, 7:32 PM IST

ETV Bharat / state

ಕಾರವಾರದ ಅಸ್ನೋಟಿ ಬಳಿ ಗುಡ್ಡ ಕುಸಿತ : ಹೆದ್ದಾರಿಗೆ ನೀರು ನುಗ್ಗಿ ಸಂಚಾರ ಅಸ್ತವ್ಯಸ್ಥ

ಕಳೆದ ನಾಲ್ಕೈದು ದಿನಗಳಿಂದ ತಾಲೂಕಿನಲ್ಲಿ ಎಡಬಿಡದೆ ಮಳೆ ಸುರಿಯುತ್ತಿದೆ. ಅಸ್ನೋಟಿ ಬಳಿ ಗುಡ್ಡ ಕುಸಿದಿದ್ದು, ಗುಡ್ಡದ ಮೇಲ್ಭಾಗದಿಂದ ಹರಿಯುತ್ತಿರುವ ನೀರಿನಲ್ಲಿ ಮಣ್ಣು ಕೊಚ್ಚಿಕೊಂಡು ಹೆದ್ದಾರಿಯಲ್ಲಿ ಹರಿಯುತ್ತಿದೆ..

ಕಾರವಾರದ ಅಸ್ನೋಟಿ ಬಳಿ ಗುಡ್ಡ ಕುಸಿತ
Hill collapse near Karwar Asnoti

ಕಾರವಾರ :ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಇಂದು ಕೂಡ ಮುಂದುವರೆದಿದೆ. ಕಾರವಾರದ ಅಸ್ನೋಟಿ ಬಳಿಯ ಹೆದ್ದಾರಿಯಲ್ಲಿ ಮಳೆ ನೀರು ನುಗ್ಗಿ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿರುವ ಘಟನೆ ನಡೆದಿದೆ.

ಹೆದ್ದಾರಿಗೆ ನೀರು ನುಗ್ಗಿ ಸಂಚಾರ ಅಸ್ತವ್ಯಸ್ಥ..

ಕಳೆದ ನಾಲ್ಕೈದು ದಿನಗಳಿಂದ ತಾಲೂಕಿನಲ್ಲಿ ಎಡಬಿಡದೆ ಮಳೆ ಸುರಿಯುತ್ತಿದೆ. ಅಸ್ನೋಟಿ ಬಳಿ ಗುಡ್ಡ ಕುಸಿದಿದ್ದು, ಗುಡ್ಡದ ಮೇಲ್ಭಾಗದಿಂದ ಹರಿಯುತ್ತಿರುವ ನೀರಿನಲ್ಲಿ ಮಣ್ಣು ಕೊಚ್ಚಿಕೊಂಡು ಹೆದ್ದಾರಿಯಲ್ಲಿ ಹರಿಯುತ್ತಿದೆ.

ಇದರಿಂದ ಕಾರವಾರ-ದಾಂಡೇಲಿ ಮೂಲಕ ಬೆಳಗಾವಿ ಸಂಪರ್ಕಿಸುವ ರಾಜ್ಯ ಹೆದ್ದಾರಿಯೂ ಸಂಪೂರ್ಣ ನೀರಿನಿಂದ ಮುಳುಗಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ. ಹೆದ್ದಾರಿಯಲ್ಲಿ ಭಾರಿ ಪ್ರಮಾಣದಲ್ಲಿ ಮಣ್ಣು ಮಿಶ್ರಿತ ನೀರು ಹರಿಯುತ್ತಿರುವುದರಿಂದ ಬೈಕ್ ಸೇರಿದಂತೆ ವಾಹನ ಸವಾರರು ಸಂಚರಿಸಲು ಹರಸಾಹಸ ಪಡುತ್ತಿರುವ ದೃಶ್ಯ ಕಂಡು ಬಂದವು.

ಓದಿ: ಭಾರೀ ಮಳೆಗೆ ಬಾಗಿದ ಮನೆ: ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ

ABOUT THE AUTHOR

...view details