ಕರ್ನಾಟಕ

karnataka

ETV Bharat / state

ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಗೆ ಹಿಂದೂ ಸಂಘಟನೆಗಳ ಆಗ್ರಹ

ವಿದೇಶಿ ಸಂಸ್ಕೃತಿ ಪ್ರಧಾನ ಉಡುಪುಗಳಿಂದ ದೇವಸ್ಥಾನದ ಸಾತ್ವಿಕತೆಗೆ ಭಂಗ ಉಂಟಾಗಿ ಭಾವಿಕ ಭಕ್ತರು ದೈವಿ ಚೈತನ್ಯದ ಪೂರ್ಣ ಲಾಭ ಪಡೆಯುವುದರಿಂದ ವಂಚಿತರಾಗುತ್ತಾರೆ. ಹೀಗಾಗಿ, ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆಯನ್ನು ಜಾರಿ ಮಾಡಬೇಕು ಎಂದು ವಿವಿಧ ಹಿಂದೂ ಸಂಘಟನೆಗಳು ದೇವಸ್ಥಾನ ಆಡಳಿತ ಮಂಡಳಿಯವರಿಗೆ ಮನವಿ ಸಲ್ಲಿಸಿದವು.

murudeshwar temple
ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವಂತೆ ಮನವಿ ಸಲ್ಲಿಕೆ

By

Published : Dec 14, 2022, 12:48 PM IST

ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವಂತೆ ಮನವಿ ಸಲ್ಲಿಕೆ

ಭಟ್ಕಳ: ವಿಶ್ವ ಪ್ರಸಿದ್ಧ ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆಯನ್ನು ಜಾರಿ ಮಾಡುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ವಿವಿಧ ಹಿಂದೂ ಸಂಘಟನೆಗಳಿಂದ ಮುರುಡೇಶ್ವರ ದೇವಸ್ಥಾನ ಆಡಳಿತ ಮಂಡಳಿಯವರಿಗೆ ಮನವಿ ಸಲ್ಲಿಸಲಾಯಿತು.

ಮುರುಡೇಶ್ವರ ದೇವಸ್ಥಾನವು ಉತ್ತರಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಲ್ಲೊಂದಾಗಿದೆ. ಭಕ್ತರು ಬೇಡಿದ್ದನ್ನು ಈಡೇರುಸುತ್ತಾನೆಂಬ ನಂಬಿಕೆ ಇರುವ ಈ ದೇವಸ್ಥಾನವು ಅತ್ಯಂತ ಪವಿತ್ರ ಹಾಗೂ ಸಮಾಜಕ್ಕೆ ಚೈತನ್ಯವನ್ನು ನೀಡುವ ಪುಣ್ಯಕ್ಷೇತ್ರವಾಗಿದೆ. ಮುರುಡೇಶ್ವರದ ಅಸ್ತಿತ್ವದಿಂದ ಮುರುಡೇಶ್ವರ ನಗರ ಪಾವನವಾಗಿದೆ. ದೇವಸ್ಥಾನದ ಪಾವಿತ್ರ್ಯವನ್ನು ಜೋಪಾಸನೆ ಮಾಡಿದರೆ ಮಾತ್ರ ಅಲ್ಲಿರುವ ದೇವತ್ವದ ಅನುಭವವನ್ನು ಪಡೆಯಬಹುದು ಎಂದು ಹಿಂದೂ ಸಂಘಟನೆ ಕಾರ್ಯಕರ್ತರು ತಿಳಿಸಿದರು.

ಹಿಂದೂ ಸಂಸ್ಕೃತಿಯ ಪ್ರಕಾರ, ಉಡುಪುಗಳನ್ನು ಧರಿಸುವುದರಿಂದ ಈಶ್ವರಿ ಚೈತನ್ಯದ ಲಾಭವಾಗುತ್ತದೆ ಮತ್ತು ದೇವತೆಯ ತತ್ವದ ಅನುಭೂತಿ ಬರುತ್ತದೆ. ಪಾಶ್ಚಾತ್ಯ ಉಡುಪುಗಳನ್ನು ಧರಿಸುವುದರಿಂದ ಮತ್ತು ಕೂದಲು ಬಿಚ್ಚಿಟ್ಟುಕೊಳ್ಳುವುದರಿಂದ ಕೆಟ್ಟ ಶಕ್ತಿಗಳಿಗೆ ಆಮಂತ್ರಣ ನೀಡಿದಂತಾಗುತ್ತದೆ. ವಿದೇಶಿ ಸಂಸ್ಕೃತಿಯ ಪ್ರಧಾನ ಉಡುಪುಗಳಿಂದ ದೇವಸ್ಥಾನದ ಸಾತ್ವಿಕತೆಗೆ ಭಂಗ ಉಂಟಾಗಿ ಭಾವಿಕ ಭಕ್ತರು ದೈವಿ ಚೈತನ್ಯದ ಪೂರ್ಣ ಲಾಭ ಪಡೆಯುವುದರಿಂದ ವಂಚಿತರಾಗುತ್ತಾರೆ.

ಇದನ್ನೂ ಓದಿ:ಮುರುಡೇಶ್ವರದ ಶಿವನ ಮೂರ್ತಿ ಮೇಲೆ ಉಗ್ರರ ಕಣ್ಣು: ಭದ್ರತೆ ಹೆಚ್ಚಿಸಿದ ಪೊಲೀಸ್ ಇಲಾಖೆ

ಅತ್ಯಂತ ಪವಿತ್ರ ಹಾಗೂ ಚೈತನ್ಯಮಯ ನಮ್ಮ ದೇವಸ್ಥಾನಗಳಲ್ಲಿ ಅವುಗಳ ಪಾವಿತ್ರ್ಯ ಮತ್ತು ಆಧ್ಯಾತ್ಮಿಕ ಸೌಂದರ್ಯವನ್ನು ಕಾಪಾಡುವುದು ಪ್ರತಿಯೊಬ್ಬ ಭಕ್ತರ ಆದ್ಯ ಕರ್ತವ್ಯವೇ ಆಗಿದೆ. ಅದ್ದರಿಂದ ಶ್ರೀ ಮುರುಡೇಶ್ವರ ದೇವಸ್ಥಾನದಲ್ಲಿ ಭಕ್ತರು ಸಾತ್ವಿಕ ಉಡುಪುಗಳನ್ನು ಧರಿಸಿ ಬರಬೇಕೆಂಬ ನಿಯಮವನ್ನು ಹಾಕಿ, ಅದರ ಪಾವಿತ್ರ್ಯವನ್ನು ಕಾಪಾಡಬೇಕಾಗಿ ಈ ಮೂಲಕ ಎಲ್ಲಾ ಶ್ರದ್ಧಾಳು ಮತ್ತು ಮಹಿಳೆಯರಿಗೆ ವಿನಂತಿಸಿಕೊಳ್ಳುತ್ತಿದ್ದೇವೆ. ಇಂತಹ ಧರ್ಮಜಾಗೃತಿಯ ಪ್ರಯತ್ನದಿಂದ ಮುರುಡೇಶ್ವರ ದೇವರ ಕೃಪೆಯು ನಿಶ್ಚಿತವಾಗಿಯೂ ನಮ್ಮೆಲ್ಲರ ಮೇಲಾಗುವುದು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:ವಿಶ್ವಪ್ರಸಿದ್ಧ ಮುರುಡೇಶ್ವರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಸಹೋದರ

ಈ ಸಂದರ್ಭದಲ್ಲಿ ಮಾಜಿ ಸೈನಿಕರಾದ ಶ್ರೀಕಾಂತ ನಾಯ್ಕ್, ಸಾಮಾಜಿಕ ಕಾರ್ಯಕರ್ತರಾದ ಶ್ರೀನಿವಾಸ ನಾಯ್ಕ್, ದಿನೇಶ್ ನಾಯ್ಕ್, ಪಾಂಡುರಂಗ ನಾಯ್ಕ್, ಸಂತೋಷ ಆಚಾರ್ಯ, ಶ್ರೀರಾಮ ಸೇನೆಯ ಜಿಲ್ಲಾ ಅಧ್ಯಕ್ಷರಾದ ಜಯಂತ ನಾಯ್ಕ್, ರಾಜು ನಾಯ್ಕ್, ಮೋಹನ್ ನಾಯ್ಕ್, ಹಿಂದೂ ಜನ ಜಾಗೃತಿ ಸಮಿತಿಯ ಜಿಲ್ಲಾ ಸಮನ್ವಯಕರಾದ ಶರತ್ ಕುಮಾರ್ ನಾಯ್ಕ, ಸಂತೋಷ ಭಟ್ಕಳ ಮುಂತಾದವರು ಉಪಸ್ಥಿತರಿದ್ದರು.

ABOUT THE AUTHOR

...view details