ಕರ್ನಾಟಕ

karnataka

ETV Bharat / state

ಹೋಳಿ ಆಚರಣೆ, ಸಮುದ್ರ ಸ್ನಾನಕ್ಕೆ ನಿರ್ಬಂಧ ಹೇರಲಾಗಿದೆ: ವಿದ್ಯಾಶ್ರೀ ಚಂದರಗಿ - Holi celebration Prohibited

ಹೋಳಿ ಸಾಂಪ್ರದಾಯಿಕ ಆಚರಣೆಯಾದರೂ ಸಹ ಕೊರೊನಾದಂತಹ ಸಂಕಷ್ಟದ ಸಮಯದಲ್ಲಿ ಜನರು ಸ್ವಯಂ ಪ್ರೇರಿತರಾಗಿ ನಿರ್ಬಂಧ ವಿಧಿಸಿಕೊಳ್ಳಬೇಕು. ಈಗಾಗಲೇ ಸರ್ಕಾರ ಸಾರ್ವಜನಿಕ ಪ್ರದೇಶದಲ್ಲಿ ಹೋಳಿ ಆಚರಣೆಗೆ ನಿರ್ಬಂಧ ವಿಧಿಸಿ ಆದೇಶಿಸಿದೆ ಎಂದು ಉಪ ವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ ಹೇಳಿದ್ದಾರೆ.

Vidyashree Chandragi
ಉಪ ವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ

By

Published : Mar 27, 2021, 10:58 PM IST

ಕಾರವಾರ: ಕೊರೊನಾ 2ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೋಳಿ ಆಚರಣೆ ಜತೆಗೆ ಕರಾವಳಿಯಲ್ಲಿ‌ ಸಮುದ್ರ ಸ್ನಾನಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ ಎಂದು ಕಾರವಾರ ಉಪ ವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ ಹೇಳಿದ್ದಾರೆ.

ಉಪ ವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ ಮನವಿ

ಮಾಧ್ಯಮದವರಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಹೋಳಿ ಸಾಂಪ್ರದಾಯಿಕ ಆಚರಣೆಯಾದರೂ ಸಹ ಕೊರೊನಾದಂತಹ ಸಂಕಷ್ಟದ ಸಮಯದಲ್ಲಿ ಜನರು ಸ್ವಯಂ ಪ್ರೇರಿತರಾಗಿ ನಿರ್ಬಂಧ ವಿಧಿಸಿಕೊಳ್ಳಬೇಕು. ಈಗಾಗಲೇ ಸರ್ಕಾರ ಸಾರ್ವಜನಿಕ ಪ್ರದೇಶದಲ್ಲಿ ಹೋಳಿ ಆಚರಣೆಗೆ ನಿರ್ಬಂಧ ವಿಧಿಸಿ ಆದೇಶಿಸಿದೆ. ಎಲ್ಲರೂ ತಪ್ಪದೇ ಆದೇಶ ಪಾಲಿಸಬೇಕು.

ಜತೆಗೆ ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲ ತೀರದಲ್ಲಿ ಪ್ರತಿ ವರ್ಷ ಹೋಳಿ ಆಡಿದ ಬಳಿಕ ನಡೆಸುವ ಸಮುದ್ರ ಸ್ನಾನವನ್ನು ಈ ಬಾರಿ ನಿಲ್ಲಿಸಬೇಕು.‌ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಅಬ್ಬರ ಹೆಚ್ಚಾಗಿದ್ದು, ಅದೇ ರಿತಿ ಇಲ್ಲಿ ಕೊರೊನಾ ಹರಡದಂತೆ ತಡೆಯಲು ಎಲ್ಲರೂ ಸಹಕಾರ ನೀಡಬೇಕು. ಈ ನಿಟ್ಟಿನಲ್ಲಿ ಮನೆಯಲ್ಲಿಯೇ ಸರಳವಾಗಿ ಹಬ್ಬ ಆಚರಿಸುವಂತೆ ಅವರು ಮನವಿ ಮಾಡಿದ್ದಾರೆ.

ಈಗಾಗಲೇ ಕಡಲ ತೀರಗಳಲ್ಲಿ ಬಿಗಿ ಪೊಲೀಸ್ ವ್ಯವಸ್ಥೆ ಕಲ್ಪುಸಲು ಸೂಚನೆ ನೀಡಲಾಗಿದೆ. ಒಂದೊಮ್ಮೆ ಆದೇಶ ಉಲ್ಲಂಘಿಸಿದವರಿಗೆ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಹಾಗೂ ಸಾಂಕ್ರಾಮಿಕ ರೋಗ ತಡೆ ಕಾಯ್ದೆ 1897 ಮತ್ತು ಭಾರತೀಯ ದಂಡ ಸಂಹಿತೆ 188 ಅಡಿ ಕ್ರಮ ಕೈಗೊಳ್ಳುವುದಾಗಿ ವಿದ್ಯಾಶ್ರೀ ಚಂದರಗಿ ಎಚ್ಚರಿಸಿದ್ದಾರೆ.

ABOUT THE AUTHOR

...view details