ಕರ್ನಾಟಕ

karnataka

ETV Bharat / state

ಹೆಚ್​ಡಿಕೆ ವಿರುದ್ಧ ಕಿಡಿಕಾರಿದ ಗೃಹ ಸಚಿವ ಬೊಮ್ಮಾಯಿ - ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾದ್ಯಮ ಗೋಷ್ಠಿ

ಉಗ್ರವಾದಿಗಳ ನೆಲೆಗಳ ಮೇಲೆ ಹಾಗೂ ಅವರ ಚಟುವಟಿಕೆಗಳ ಮೇಲೆ ಪೊಲೀಸರು ನಿಗಾ ವಹಿಸಿದ್ದಾರೆ. ಕರ್ನಾಟಕದಲ್ಲಿ ಉಗ್ರರ ಯಾವುದೇ ಚಟುವಟಿಕೆಗೆ ಅವಕಾಶ ನೀಡುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

home minister basavaraj bommai
ಗೃಹ ಸಚಿವ ಬಸವರಾಜ ಬೊಮ್ಮಾಯಿ

By

Published : Jan 12, 2020, 1:46 PM IST

ಶಿರಸಿ: ಉಗ್ರವಾದಿಗಳ ನೆಲೆಗಳ ಮೇಲೆ ಹಾಗೂ ಅವರ ಚಟುವಟಿಕೆಗಳ ಮೇಲೆ ಪೊಲೀಸರು ನಿಗಾ ವಹಿಸಿದ್ದಾರೆ. ಕರ್ನಾಟಕದಲ್ಲಿ ಉಗ್ರರ ಯಾವುದೇ ಚಟುವಟಿಕೆಗೆ ಅವಕಾಶ ನೀಡುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ

ಕುಮಾರಸ್ವಾಮಿ ಅಧಿಕಾರದಲ್ಲಿ ಇದ್ದಾಗ ಪೊಲೀಸರನ್ನು ಯಾವುದಕ್ಕೆ ಬಳಸಲಾಗಿತ್ತು ಎಂದು ಎಲ್ಲರಿಗೂ ಗೊತ್ತಿದೆ ಎಂದು ಮಾಧ್ಯಮದವರ ಪ್ರಶ್ನೆಗ ಉತ್ತರಿಸಿದರು.

ಮಂಗಳೂರು ಗಲಭೆ ಕುರಿತು ಇತ್ತೀಚೆಗೆ ಮಾಜಿ ಸಿಎಂ ಕುಮಾರಸ್ವಾಮಿ ವಿಡಿಯೋ ಬಿಡುಗಡೆಗೊಳಿಸಿದ್ದರು.

ಸಿದ್ದಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಿಂದ ಉಗ್ರರು ಧಾವಿಸುತ್ತಿರುವ ಮಾಹಿತಿ ದೊರೆತ ತಕ್ಷಣ ದಾಳಿ ನಡೆಸಿ ಮೂವರನ್ನು ಬಂಧಿಸಲಾಗಿದೆ. ಇನ್ನೂ ಇಬ್ಬರು ತಲೆಮರೆಸಿಕೊಂಡಿದ್ದು, ಎಲ್ಲಾ ಜಾಲಗಳನ್ನು ಬೇಧಿಸುವ ಕಾರ್ಯ ನಡೆಯುತ್ತಿದೆ ಎಂದರು.‌

ಉಗ್ರರು ನಿರಂತರವಾಗಿ ಒಂದು ಕಡೆ ಇರುವುದಿಲ್ಲ. ತಾಣಗಳನ್ನು ಬದಲಿಸುತ್ತಿರುತ್ತಾರೆ. ಭಯೋತ್ಪಾದನೆ ಮಾಡುವ ಎಲ್ಲಾ ಶಕ್ತಿಗಳನ್ನು ನಿಯಂತ್ರಿಸಲು ಪೊಲೀಸರು ಸಜ್ಜಾಗಿದ್ದಾರೆ ಎಂದರು.

ಪೊಲೀಸರು ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯವಿರುವ ಎಲ್ಲಾ ಕ್ರಮ ಕೈಗೊಂಡಿದ್ದಾರೆ. ಆದ, ಕಾರಣ ಕುಮಾರಸ್ವಾಮಿ ಅವರು ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದು ಹೇಳಿದರು.

ABOUT THE AUTHOR

...view details