ಕಾರವಾರ (ಉತ್ತರ ಕನ್ನಡ):''ಆಳ್ವಾಸ್ ಶಿಕ್ಷಣ ಪತಿಷ್ಠಾನದ ವತಿಯಿಂದ ಮೂಡಬಿದಿರೆಯ ವಿದ್ಯಾಗಿರಿ ಕಾಲೇಜು ಆವರಣದಲ್ಲಿ ಅಕ್ಟೋಬರ್ 6 ಮತ್ತು 7 ರಂದು `ಆಳ್ವಾಸ್ ಪ್ರಗತಿ-2023’ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ'' ಎಂದು ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಹೇಳಿದರು.
''ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 13ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳ ಇದಾಗಿದೆ. ಈವರೆಗೆ 182 ಕಂಪೆನಿಗಳು ನೋಂದಾಯಿಸಿಕೊಂಡಿದ್ದು, 200ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಐಸಿಐಸಿಐ, ಆ್ಯಕ್ಸಿಸ್, ಉಜ್ಜೀವನ್ ಫೈನಾನ್ಸ್ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್, ಕರೂರ್ ವೈಶ್ಯ ಬ್ಯಾಂಕ್ಗಳು ಭಾಗವಹಿಸಲಿವೆ'' ಎಂದು ಮಾಹಿತಿ ನೀಡಿದರು.
''ಏಸ್ ಡಿಸೈನರ್, ವೋಲ್ವೊ, ಸನ್ಸೆರಾ ಎಂಜಿನಿಯರಿಂಗ್ ಲಿಮಿಟೆಡ್, ಫೌರೆಸಿಯಾ ಎಮಿಷನ್ಸ್ ಕಂಟ್ರೋಲ್ ಟೆಕ್ನಾಲಜೀಸ್ ಇಂಡಿಯಾ ಪ್ರೈ.ಲಿ, ಮೈನಿ ಪ್ರಿಸಿಷನ್ ಇಂಡಿಯಾ ಪ್ರೈ.ಲಿ, ಸ್ವಿಚ್ಗೇರ್ ಆ್ಯಂಡ್ ಕಂಟ್ರೋಲ್ ಟೆಕ್ನಿಕ್ಸ್ ಸುಮಾರು 200ಕ್ಕೂ ಹೆಚ್ಚು ಉದ್ಯೋಗಾವಕಾಶಗಳನ್ನು ಬಿಇ ಮೆಕ್ಯಾನಿಕಲ್ ಎಂಜಿನಿಯರಿಂಗ್ ಆಕಾಂಕ್ಷಿಗಳಿಗೆ ನೀಡಲಿವೆ'' ಎಂದರು.
ವಿವಿಧ ಕಂಪನಿಗಳು ಭಾಗಿ:''ಗಲ್ಫ್ ಬಹುರಾಷ್ಟ್ರೀಯ ಕಂಪೆನಿಗಳು ಆಳ್ವಾಸ್ ಪ್ರಗತಿಯಲ್ಲಿ ಪಾಲ್ಗೊಳ್ಳಲಿವೆ. ಸಿವಿಲ್ ಮತ್ತು ಮೆಕ್ಯಾನಿಕಲ್ ಎಂಜಿನಿಯರ್ಗಳನ್ನು ಸೌದಿ ಅರೇಬಿಯಾಕ್ಕೆ, ಬುರ್ಜೀಲ್ ಹೋಲ್ಡಿಂಗ್ಸ್ ವೈದ್ಯರು, ನರ್ಸ್ ಮತ್ತು ವೈದ್ಯಕೀಯ ತಂತ್ರಜ್ಞರನ್ನು ಒಮನ್ಗೆ ಹಾಗೂ ಭವಾನಿ ಶಿಪ್ಪಿಂಗ್ ಪ್ರೈ.ಲಿ ಹಲವಾರು ಹುದ್ದೆಗಳ ಅವಕಾಶವನ್ನು ನೀಡುತ್ತಿದೆ. ಟೊಯೊಟೊ ಇಂಡಸ್ಟ್ರೀಸ್ ಎಂಜಿನ್ ಇಂಡಿಯಾ ಪ್ರೈ.ಲಿ, ಹೋಂಡಾ, ಒರ್ಲಿಕಾನ್ ಬಲ್ಸೆರ್ಸ್ ಕೋಟಿನ್ಇಂಡಿಯಾ ಪ್ರೈ.ಲಿ, ವೂನೋ ಮಿಂಡಾ ಸೇರಿದಂತೆ ಇತರ ಕಂಪೆನಿಗಳು ಐಟಿಐ ಮತ್ತು ಡಿಪ್ಲೊಮಾ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ'' ಎಂದು ತಿಳಿಸಿದರು.