ಪದವೀಧರರ ಸೇವೆಗಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ: ಬಸವರಾಜ ಗುರಿಕಾರ - Basavaraja Gurikara talks about election
ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಈಗಾಗಲೇ ಸೇವೆ ಸಲ್ಲಿಸುತ್ತಿರುವ ಅನುಭವದ ಆಧಾರದ ಮೇಲೆ ಪದವೀಧರರ ಸೇವೆಯನ್ನು ಮಾಡುತ್ತೇನೆ ಎಂದು ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ತಿಳಿಸಿದ್ದಾರೆ.
ಬಸವರಾಜ ಗುರಿಕಾರ..
ಶಿರಸಿ:ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗಲು ಹಾಗೂ ಸೇವೆ ಮಾಡುವ ಉದ್ದೇಶದಿಂದ ಪ್ರತಿನಿಧಿಯಾಗಲು ಬಯಸಿದ್ದೇನೆ. ಅವರ ಆಶೀರ್ವಾದದಿಂದ ಚುನಾವಣೆ ಎದುರಿಸುತ್ತೇನೆ ಎಂದು ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಹೇಳಿದರು.