ಕಾರವಾರ:ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ತಾಲೂಕಿನ ಕಡವಾಡ ಬಳಿ ಪೊಲೀಸರು ಬಂಧಿಸಿದ್ದಾರೆ.
ಅಕ್ರಮವಾಗಿ ಗೋವು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳು ಅಂದರ್
ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಾರವಾರ ತಾಲೂಕಿನ ಕಡವಾಡ ಬಳಿ ಪೊಲೀಸರು ಬಂಧಿಸಿದ್ದಾರೆ.
ಕಾರವಾರದಲ್ಲಿ ಅಕ್ರಮ ಗೋ ಸಾಗಾಟ..ಆರೋಪಿಗಳ ಬಂಧನ
ಕಡವಾಡದ ಗೌಸಾಖ್ ಖಾನ್ ಹಾಗೂ ಜುಬೇರ್ ಮಕಬುಲ್ ಅಕದಾರ್ ಬಂಧಿತರು. ನಿನ್ನೆ ತಡರಾತ್ರಿ ಬರಗಲ್ನಿಂದ ಸದಾಶಿಗಡ ಕಡೆ ಎರಡು ಹಸುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ. ತಕ್ಷಣ ಜಾನುವಾರುಗಳನ್ನು ರಕ್ಷಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.