ಕರ್ನಾಟಕ

karnataka

ETV Bharat / state

ಕಾರವಾರ : ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದ ಲಾರಿ ಪಲ್ಟಿ - ಕಾರವಾರ ಬಳಿ ಮದ್ಯ ಸಾಗಾಟದ ಲಾರಿ ಪಲ್ಟಿ

ಲಾರಿಯಲ್ಲಿದ್ದ ಗೋವಾ ಮದ್ಯದ ಮೌಲ್ಯವನ್ನು ಲೆಕ್ಕ ಹಾಕಲಾಗುತ್ತಿದೆ. ಐದು ಲಕ್ಷಕ್ಕೂ ಅಧಿಕ ಮೌಲ್ಯದ ಮದ್ಯ ಇರಬಹುದು ಎಂದು ಅಂದಾಜಿಸಲಾಗಿದೆ..

Illegal liquor transporting lorry overturned in Karwar
ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದ ಲಾರಿ ಪಲ್ಟಿ

By

Published : Apr 4, 2021, 8:18 PM IST

ಕಾರವಾರ :ಅಕ್ರಮವಾಗಿ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಅಂಕೋಲಾ ತಾಲೂಕಿನ ಅಡ್ಲೂರು ಬಳಿ ನಡೆದಿದೆ.

ಮಹಾರಾಷ್ಟ್ರ ಮೂಲದ ಲಾರಿ, ಗೋವಾದಿಂದ ಹುಬ್ಬಳ್ಳಿ ಕಡೆಗೆ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದಾಗ ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿಯಲ್ಲಿ ವಿವಿಧ ಬ್ರಾಂಡ್​ಗಳ ಮದ್ಯವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಲಾರಿ ಪಲ್ಟಿಯಾದ ಬೆನ್ನಲ್ಲೇ ಆರೋಪಿಗಳು ಪರಾರಿಯಾಗಿದ್ದಾರೆ.

ಓದಿ : ಬಟ್ಟೆ ವ್ಯಾಪಾರದ ಜತೆ ಡ್ರಗ್ಸ್​ ದಂಧೆ ಆರೋಪ: ಚಿಕ್ಕಬಳ್ಳಾಪುರದಲ್ಲಿ ಇಬ್ಬರು ಡ್ರಗ್ಸ್​ ಪೆಡ್ಲರ್ಸ್​​​ ಅರೆಸ್ಟ್

ಲಾರಿಯಲ್ಲಿದ್ದ ಗೋವಾ ಮದ್ಯದ ಮೌಲ್ಯವನ್ನು ಲೆಕ್ಕ ಹಾಕಲಾಗುತ್ತಿದೆ. ಐದು ಲಕ್ಷಕ್ಕೂ ಅಧಿಕ ಮೌಲ್ಯದ ಮದ್ಯ ಇರಬಹುದು ಎಂದು ಅಂದಾಜಿಸಲಾಗಿದೆ.

ಗೋವಾ ಗಡಿಭಾಗದಲ್ಲಿ ಪೊಲೀಸ್ ಹಾಗೂ ಅಬಕಾರಿ ಇಲಾಖೆ ಪರಿಶೀಲಿಸುತ್ತಿದ್ದರೂ, ಇಷ್ಟೊಂದು ಮೌಲ್ಯದ ಮದ್ಯ ರಾಜಾರೋಷವಾಗಿ ಸಾಗಾಟವಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ABOUT THE AUTHOR

...view details