ಶಿರಸಿ: ಅಕ್ರಮವಾಗಿ ಜಾನುವಾರು ಸಾಗಾಣಿಕೆ ಮಾಡುತ್ತಿದ್ದ ತಂಡದ ಮೇಲೆ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿ 3 ದನಗಳನ್ನು ರಕ್ಷಣೆ ಮಾಡಿದ ಘಟನೆ ಶಿರಸಿ ತಾಲೂಕಿನ ಬನವಾಸಿಯ ಕಾಳಂಗಿ ಕ್ರಾಸ್ ಬಳಿ ನಡೆದಿದೆ.
ಅಕ್ರಮ ಗೋ ಸಾಗಾಣಿಕೆ: ಇಬ್ಬರ ಬಂಧನ - Two arrested in banvasi
ಶಿರಸಿ ತಾಲೂಕಿನ ಬನವಾಸಿ ಬಳಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿ, ಮೂರು ಗೋವುಗಳನ್ನು ರಕ್ಷಿಸಿದ್ದಾರೆ.
ಅಕ್ರಮ ಗೋ ಸಾಗಾಣಿಕೆ
ಬನವಾಸಿಯ ಮಹ್ಮದ್ ಜಾಫರ್ ಮೌಲಾಲಿ ಶೇಕ್ ಹಾಗೂ ನಾಗರಾಜ ಫಕೀರಪ್ಪ ಬೋವಿವಡ್ಡರ್ ಬಂಧಿತ ಆರೋಪಿಗಳಾಗಿದ್ದಾರೆ. ಮಹೀಂದ್ರ ಜೀತೋ ವಾಹನದಲ್ಲಿ ( ಕೆ.ಎ. 31 ಎ 2124) ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದಾಗ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಬನವಾಸಿ ಪೊಲೀಸರು, ಆರೋಪಿಗಳನ್ನು ಬಂಧಿಸಿ ವಾಹನವನ್ನ ವಶಕ್ಕೆ ಪಡೆದಿದ್ದಾರೆ. ಬನವಾಸಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.