ಕಾರವಾರ:ಗೋವಾದಿಂದ ಅಕ್ರಮವಾಗಿ ಕಾರವಾರಕ್ಕೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 1.15 ಲಕ್ಷ ರೂ. ಮೌಲ್ಯದ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗೋವಾದಿಂದ ಕಾರವಾರಕ್ಕೆ ಅಕ್ರಮವಾಗಿ ಸಾಗಾಟ: ಕಾರು ಸಮೇತ ಮದ್ಯ ವಶ - ಅಕ್ರಮ ಮದ್ಯ ಸಾಗಾಟ
ವಿನಯ್ ನಾಗೇಕರ್ ಎಂಬಾತ ಗೋವಾದಿಂದ ಕಾರವಾರಕ್ಕೆ ಅಕ್ರಮವಾಗಿ ಕಾರಿನಲ್ಲಿ ಮದ್ಯ ಸಾಗಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಕಾರು ಸಮೇತ 1.15 ಲಕ್ಷ ರೂ. ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.
1.15 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ
ತಾಲೂಕಿನ ಬಾಂಡಿಶಿಟ್ಟಾದ ವಿನಯ್ ನಾಗೇಕರ್ ಎಂಬಾತ ಕಾರಿನಲ್ಲಿ ಮದ್ಯವನ್ನು ಸಾಗಣೆ ಮಾಡುತ್ತಿದ್ದ. ಈ ವೇಳೆ ಖಚಿತ ಮಾಹಿತಿ ಪಡೆದು ಡಿವೈಎಸ್ಪಿ ಅರವಿಂದ ಕಲ್ಗುಜ್ಜಿ ಮಾರ್ಗದರ್ಶನದಲ್ಲಿ ಚಿತ್ತಾಕುಲ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ ರಾಷ್ಟ್ರೀಯ ಹೆದ್ದಾರಿ ಮಾವಿನಹೊಳೆ ಬಳಿ ಕಾರು ಸಮೇತ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.
ಘಟನೆಯಲ್ಲಿ ಕಾರು ಚಾಲಕ ಹಾಗೂ ಆರೋಪಿ ವಿನಯ್ ತಪ್ಪಿಸಿಕೊಂಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.