ಭಟ್ಕಳ :ತಾಲೂಕಿನ ಸಾಗರ ರಸ್ತೆಯ ಕಿತ್ರೆ ಕ್ರಾಸ್ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಭಟ್ಕಳ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.
ಗಣಪತಿ ನಾಯ್ಕ ಹೆರಾಳಿ ಮಂಕಿ, ಜನಾರ್ದನ ಹರಿಕಾಂತ್ರ ಮುರುಡೇಶ್ವ, ಆನಂದ ಮೊಗೇರ ಕರಿಕಲ್ ಬಂಧಿತ ಆರೋಪಿಗಳು. ಇವರು ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದರು. ಈ ವೇಳೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.