ಕಾರವಾರ: ಬೆಳಗ್ಗೆ ಏಳು ಜನರಲ್ಲಿ ಸೋಂಕು ದೃಢಪಟ್ಟು ಆತಂಕಕ್ಕೆ ಕಾರಣವಾಗಿದ್ದ ಭಟ್ಕಳದಲ್ಲಿ ಸಂಜೆ ಹೊತ್ತಿಗೆ ಮತ್ತೊಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸಕ್ರಿಯ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.
ಭಟ್ಕಳದಲ್ಲಿ ಮತ್ತೊಬ್ಬರಿಗೆ ಕೊರೊನಾ... 21ಕ್ಕೇರಿದ ಸಕ್ರಿಯ ಸೋಂಕಿತರ ಸಂಖ್ಯೆ! - another corona case in bhatkala
7 ಮಂದಿಗೆ ಸೋಂಕು ತಗುಲಿರುವ ಕುರಿತು ಇಂದು ಬೆಳಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿತ್ತು. ಈಗ ಸಂಜೆ ವೇಳೆ ಬಿಡುಗಡೆಯಾದ ಬುಲೆಟಿನ್ನಲ್ಲಿ ಮತ್ತೊಬ್ಬರಿಗೆ ಸೋಂಕು ತಗುಲಿರುವ ಬಗ್ಗೆ ಮಾಹಿತಿ ನೀಡಲಾಗಿದೆ.
ಆಸ್ಪತ್ರೆ
ಸಂಜೆಯ ಹೆಲ್ತ್ ಬುಲೆಟಿನ್ನಲ್ಲಿ 23 ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ದೃಢಪಟ್ಟಿರುವ ಕುರಿತು ಖಚಿತಪಡಿಸಲಾಗಿದೆ. ಈಕೆ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ಕೊಡಿಸಲು ಪತಿಯೊಂದಿಗೆ ಹೋದ ಸಂದರ್ಭದಲ್ಲಿ ಸೋಂಕು ತಗುಲಿರಬಹುದು ಎನ್ನಲಾಗಿದೆ.
ಸೋಂಕಿತ ಮಹಿಳೆ ಕುಟುಂಬದ 8 ಮಂದಿ ಹಾಗೂ ಅವರ ಸಂಪರ್ಕದಲ್ಲಿದ್ದ ನಾಲ್ವರಿಗೆ ನಿನ್ನೆ ಸೋಂಕು ದೃಢಪಟ್ಟಿತ್ತು. ನಾಲ್ಕು ದಿನದ ಹಿಂದೆ ಇದೇ ಕುಟುಂಬದ 18 ವರ್ಷದ ಯುವತಿಗೆ ಸೋಂಕು ತಗುಲಿತ್ತು.