ಶಿರಸಿ (ಉ.ಕ): ಭಾರತೀಯ ನೌಕಾಪಡೆಗೆ ಸೇರಿದ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ಶಿರಸಿ ತಾಲೂಕಿನ ದಾಸನಕೊಪ್ಪ ಬಳಿ ಲ್ಯಾಂಡ್ ಆಗಿದ್ದು, ಹೆಲಿಕಾಪ್ಟರ್ ನೋಡಲು ಸ್ಥಳೀಯ ಜನರು ಮುಗಿಬಿದ್ದ ಘಟನೆ ನಡೆದಿದೆ.
ಶಿರಸಿ ಬಳಿ ನೌಕಾಪಡೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಸೆಲ್ಫಿಗಾಗಿ ಮುಗಿಬಿದ್ದ ಜನತೆ - ಭಾರತೀಯ ವಾಯುಸೇನೆ
8 ಮಂದಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ್ದು, ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಅನಿರೀಕ್ಷಿತವಾಗಿ ಲ್ಯಾಂಡ್ ಆಗಿರುವ ಹೆಲಿಕಾಪ್ಟರ್ ಕಂಡ ಜನತೆ ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ.
ಶಿರಸಿ ಬಳಿ ತುರ್ತು ಭೂಸ್ಪರ್ಶ ಮಾಡಿದ ನೌಕಾಪಡೆ ಕಾಪ್ಟರ್
8 ಮಂದಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡ್ ಆಗಿದ್ದು, ಎಲ್ಲರೂ ಸೇಫ್ ಆಗಿದ್ದಾರೆ. ದಾಸನಕೊಪ್ಪದ ಎಪಿಎಂಸಿ ಗ್ರೌಂಡ್ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದ್ದು, ಹೆಲಿಕಾಪ್ಟರ್ ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿತ್ತು ಎನ್ನಲಾಗಿದೆ.
ತಾಂತ್ರಿಕ ದೋಷ ಸರಿಪಡಿಸಲು ಗೋವಾದಿಂದ ತಜ್ಞರ ತಂಡವೊಂದು ಶಿರಸಿಗೆ ಆಗಮಿಸುತ್ತಿದೆ. ಇನ್ನು ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿದ್ದು, ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ.
Last Updated : Nov 13, 2020, 4:45 PM IST