ಶಿರಸಿ : ಐಪಿಎಲ್ ಕ್ರಿಕೆಟ್ ಪಂದ್ಯದ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿಕೊಂಡಿದ್ದ ಇಬ್ಬರನ್ನು ಪೊಲೀಸರು ನಗರದ ಮರಾಠಿಕೊಪ್ಪ ಬಸ್ ನಿಲ್ದಾಣದ ಹತ್ತಿರ ಬಂಧಿಸಿದ್ದಾರೆ.
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ : ಇಬ್ಬರ ಬಂಧನ
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್
ಸಾರ್ವಜನಿಕ ಸ್ಥಳದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಮರಾಠಿಕೊಪ್ಪದ ಚಂದ್ರಶೇಖರ ಪಟಗಾರ ಹಾಗೂ ಕಿರಣ ಪಟಗಾರ ಬಂಧಿತ ಆರೋಪಿಗಳಾಗಿದ್ದಾರೆ.
ಆರೋಪಿತರಿಂದ 11,295 ರೂ. ಹಾಗೂ ಜೂಜಾಟಕ್ಕೆ ಬಳಸಿಕೊಂಡಿದ್ದ 2 ಮೊಬೈಲ್ಗಳನ್ನು ಮಾರುಕಟ್ಟೆ ಪೊಲೀಸರು ಜಪ್ತಿ ಮಾಡಿಕೊಂಡಿದ್ದು, ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.