ಕರ್ನಾಟಕ

karnataka

ETV Bharat / state

ಜೆಡಿಎಸ್ ಜಿಲ್ಲಾಧ್ಯಕ್ಷರ ಕಾರು ಅಪಘಾತ: ಮೂವರಿಗೆ ಗಂಭೀರ ಗಾಯ - ಈಟಿವಿ ಭಾರತ ಕನ್ನಡ

ಕಾರು ಮತ್ತು ಟ್ಯಾಂಕರ್​ ನಡುವೆ ಅಪಘಾತ ನಡೆದು ಉತ್ತರ ಕನ್ನಡ ಜಿಲ್ಲೆಯ ಜೆಡಿಎಸ್ ಜಿಲ್ಲಾಧ್ಯಕ್ಷ ಸೇರಿ ಮೂವರಿಗೆ ಗಾಯವಾಗಿದೆ.

jds-district-president-car-accident-3-were-injured
ಜೆಡಿಎಸ್ ಜಿಲ್ಲಾಧ್ಯಕ್ಷರ ಕಾರು ಅಪಘಾತ: ಮೂವರಿಗೆ ಗಂಭೀರ ಗಾಯ!

By

Published : Feb 23, 2023, 7:50 PM IST

ಕಾರವಾರ (ಉತ್ತರ ಕನ್ನಡ): ಕಾರು ಹಾಗೂ ಟ್ಯಾಂಕರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕುಮಟಾ ರಾಷ್ಟ್ರೀಯ ಹೆದ್ದಾರಿ 66ರ ಹಿರೇಗುತ್ತಿ ಬಳಿ ನಡೆದಿದೆ. ಅಂಕೋಲಾದಿಂದ ಹೊನ್ನಾವರ ಕಡೆ ತೆರಳುತ್ತಿದ್ದ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ, ವಿ.ಎಂ.ಭಂಡಾರಿ, ಪರಮೇಶ್ವರ ನಾಯ್ಕ ಅವರಿದ್ದ ಕಾರು ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಅಕ್ರಮ ಮರಳು ಲಾರಿಗಳ ತಪಾಸಣೆ ವೇಳೆ ಗಣಿ ನಿರೀಕ್ಷಕನ ಜೀವಂತ ಸುಡಲು ಯತ್ನ

ABOUT THE AUTHOR

...view details