ಕಾರವಾರ: 66ನೇ ಕನ್ನಡ ರಾಜ್ಯೋತ್ಸವವನ್ನು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಉತ್ತರಕನ್ನಡದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ - uttarkannada
66ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆ ಉತ್ತರಕನ್ನಡ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಸಚಿವ ಶಿವರಾಮ್ ಹೆಬ್ಬಾರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು..
ಧ್ವಜಾರೋಹಣ ನಡೆಸಿದ ಬಳಿಕ ಪರೇಡ್ ಕಮಾಂಡರ್ ಮನವಿಯಂತೆ ವಾಹನದಲ್ಲಿ ತೆರಳಿ ಪರೇಡ್ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಪೊಲೀಸ್, ಡಿಎಆರ್, ಮಹಿಳಾ ಪೊಲೀಸ್, ಅರಣ್ಯ, ಗೃಹರಕ್ಷಕ ದಳ, ಎನ್‌ಸಿಸಿ ಸೇರಿದಂತೆ 8 ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಮಾತ್ರವಲ್ಲದೆ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಭಾಗಿಯಾಗಿದ್ದರು.
20 ನಿಮಿಷ ತಡವಾಗಿ ನಡೆದ ಧ್ವಜಾರೋಹಣ :ಪ್ರತಿ ವರ್ಷ 9 ಗಂಟೆಗೆ ನಡೆಯುತ್ತಿದ್ದ ಧ್ವಜಾರೋಹಣ ಕಾರ್ಯಕ್ರಮ ಈ ಬಾರಿ ಸಮಯಕ್ಕೆ ಸರಿಯಾಗಿ ಸಚಿವರು ಬಾರದ ಕಾರಣ 20 ನಿಮಿಷ ತಡವಾಗಿ ಮಾಡಲಾಯಿತು. ಇದರಿಂದಾಗಿ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು, ಪಥಸಂಚಲನ ನಡೆಸಬೇಕಿರುವ ಪೊಲೀಸರು, ವಿದ್ಯಾರ್ಥಿಗಳು ಬಿಸಿಲಿನಲ್ಲಿ ಕಾಯುವಂತಾಯಿತು.