ಕರ್ನಾಟಕ

karnataka

ETV Bharat / state

ನಾಮಫಲಕದಲ್ಲಿ ಕನ್ನಡ ನೂರಕ್ಕೆ ನೂರರಷ್ಟು ಇರಲಿ...ಕರವೇ ಆಗ್ರಹ - Karavar latest news

ಸರ್ಕಾರಿ ಹಾಗೂ ಸಂಘ ಸಂಸ್ಥೆಗಳಲ್ಲಿ ಅಳವಡಿಸಿರುವ ಅನ್ಯ ಭಾಷೆ ನಾಮಫಲಕಗಳನ್ನು ತೆರವುಗೊಳಿಸಿ ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.

karave-demanding-for-kannada-nameplate

By

Published : Oct 4, 2019, 6:08 PM IST

ಕಾರವಾರ: ಸರ್ಕಾರಿ ಹಾಗೂ ಸಂಘ ಸಂಸ್ಥೆಗಳಲ್ಲಿ ಅಳವಡಿಸಿರುವ ಅನ್ಯ ಭಾಷೆ ನಾಮಫಲಕಗಳನ್ನು ತೆರವುಗೊಳಿಸಿ ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.

ಕಾರವಾರ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದ ಸಂಘಟನೆಯ ಪದಾಧಿಕಾರಿಗಳು, ಉತ್ತರ ಕನ್ನಡದಲ್ಲಿ ಕನ್ನಡ ನಾಮಫಲಕಗಳು ದಿನ ದಿನೇ ಮಾಯವಾಗುತ್ತಿವೆ. ಇಲ್ಲಿ ಕನ್ನಡ ಗಟ್ಟಿಗೊಳಿಸುವ ನಿಟ್ಟಿನಲ್ಲಿ ನಾಮಫಲಕದಲ್ಲಿ ಕನ್ನಡ ನೂರಕ್ಕೆ ನೂರರಷ್ಟು ಇರುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು

ಸಂಘದ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ ಮಾತನಾಡಿ, ತಿಂಗಳೊಳಗಾಗಿ ಇದನ್ನು ಕಾರ್ಯಗತಗೊಳಿಸಬೇಕು. ಕನ್ನಡ ಹೊರತುಪಡಿಸಿ ಬೇರೆ ಭಾಷೆಗಳಲ್ಲಿ ನಾಫಲಕ ಅಳವಡಿಸಿದರೆ ಜಿಲ್ಲಾಡಳಿತ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಬ್ಯಾಂಕ್​​ಗಳಲ್ಲೂ ಕನ್ನಡದಲ್ಲೇ ವ್ಯವಹಾರ ನಡೆಸಬೇಕು ಎಂದು ಆಗ್ರಹಿಸಿದರು.

ABOUT THE AUTHOR

...view details