ಕಾರವಾರ: ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಗೋವಾದಲ್ಲಿ ಎಸ್ಎಸ್ಎಲ್ಸಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಪಠ್ಯಕ್ರಮದಂತೆ ಅಲ್ಲಿಯೇ ಪರೀಕ್ಷೆ ನಡೆಸಬೇಕೆಂಬ ಕಾರವಾರದ ಕೆಲ ಗ್ರಾಮಸ್ಥರ ಒತ್ತಾಯಕ್ಕೆ ಸರ್ಕಾರ ಮಣಿದಿದ್ದು, ಗೋವಾದಲ್ಲಿಯೇ ಪರೀಕ್ಷೆ ನಡೆಸಲು ಮುಂದಾಗಿದೆ.
ಗೋವಾದಲ್ಲಿ ಹೆಚ್ಚುತ್ತಿರುವ ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಕಾರವಾರದ ಉಳಗಾ ಶಿವಾಜಿ ಪ್ರೌಢಶಾಲೆಯಲ್ಲಿ ಪರೀಕ್ಷೆ ನಡೆಸಲಾಗುತ್ತಿತ್ತು. ಅದರಂತೆ ಪ್ರಸಕ್ತ ಸಾಲಿನಲ್ಲಿಯೂ ಗೋವಾದ ಎರಡು ಪ್ರೌಢಶಾಲೆಯ 47 ವಿದ್ಯಾರ್ಥಿಗಳಿಗೆ ಉಳಗಾ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಸಲು ಸಿದ್ದತೆ ನಡೆಸಲಾಗಿತ್ತು. ಆದರೆ ಗೋವಾದಲ್ಲಿ ದಿನೇ ದಿನೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಾರವಾರ ಉಳಗಾದ ಸುತ್ತಮುತ್ತಲಿನ ಪಾಲಕರು ಆತಂಕ ವ್ಯಕ್ತಪಡಿಸಿದ್ದರು.