ಶಿರಸಿ (ಉತ್ತರ ಕನ್ನಡ): ಸ್ಟೇರಿಂಗ್ ಕಟ್ ಆಗಿ ಸರ್ಕಾರಿ ಬಸ್ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ 16ನೇ ಮೈಲಿಕಲ್ ಬಳಿ ನಡೆದಿದೆ. ಹಳಿಯಾಳದಿಂದ ಸಾಗರಕ್ಕೆ ಹೋಗುತ್ತಿದ್ದ ಬಸ್ಸಿನಲ್ಲಿ 47 ಜನ ಪ್ರಯಾಣಿಕರಿದ್ದರು. ಆದರೆ ಅಪಘಾತದಿಂದ ಸಿನಿಮೀಯ ರೀತಿಯಲ್ಲಿ ಪ್ರಯಾಣಿಕರು ಪಾರಾಗಿದ್ದಾರೆ.
ಒಂದೆರಡು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪಲ್ಟಿಯಾದ ತಕ್ಷಣ ಕಂದಕಕ್ಕೆ ಉರುಳಿದ ಬಸ್ ಮರಕ್ಕೆ ಡಿಕ್ಕಿ ಹೊಡೆದಿರುವುದರಿಂದ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಸಿದ್ದಾಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಅಪಘಾತದಲ್ಲಿ ಐಟಿ ಉದ್ಯೋಗಿ ಸಾವು:ಬೆಂಗಳೂರಿನಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ದ್ವಿಚಕ್ರ ವಾಹನದ ಟೈರ್ ಸ್ಫೋಟಗೊಂಡು ಹೊಸಕೆರೆಹಳ್ಳಿಯ ಅಪಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಸುಲೋಚನ (24) ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ದಿನ ಸಾವನ್ನಪ್ಪಿದ್ದರು. ಮತ್ತೊಬ್ಬ ಸವಾರ ಆನಂದ ಎಂಬುವವರು ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಲೋಚನ ಅರ್ಧ ಹೆಲ್ಮೆಟ್ ಧರಿಸಿದ್ದರಿಂದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿತ್ತು.
ಸಾಫ್ಟ್‌ವೇರ್ ಉದ್ಯೋಗಿಗಳಾಗಿದ್ದ ಸುಲೋಚನಾ ಹಾಗೂ ಆನಂದ್ ಕೋರಮಂಗಲದಿಂದ ತಮ್ಮ ಮನೆಗೆ ದ್ವಿಚಕ್ರ ವಾಹನದಲ್ಲಿ ವಾಪಸಾಗುತ್ತಿದ್ದರು. ನೈಸ್ ರಸ್ತೆಯ ಟೋಲ್ ಬಳಿ ದ್ವಿಚಕ್ರ ವಾಹನದ ಹಿಂಬದಿ ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ ಇಬ್ಬರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಹಿರಿಯ ರಂಗ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಕಾರು ಅಪಘಾತದಲ್ಲಿ ನಿಧನ