ಕರ್ನಾಟಕ

karnataka

ETV Bharat / state

ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್: ಆರೋಪಿಗೆ 3 ತಿಂಗಳು ಕಾರಾಗೃಹ ಶಿಕ್ಷೆ - ಅಪ್ರಾಪ್ತರ ಅಶ್ಲೀಲ ವಿಡಿಯೋ ಅಪ್ಲೋಡ್

ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿದ್ದ ಆರೋಪಿ ಬಲೆರಾಮ್ ರೌಲ್ ಎಂಬಾತನಿ​​ಗೆ 10 ಸಾವಿರ ರೂ. ದಂಡ ಮತ್ತು 3 ತಿಂಗಳ ಸಾದಾ ಕಾರಾಗೃಹ ವಾಸ ಶಿಕ್ಷೆ ವಿಧಿಸಿ ಕಾರವಾರದ ಸಿಜೆಎಂ ನ್ಯಾಯಾಲಯ ಆದೇಶ ನೀಡಿದೆ.

Representative image
ಸಾಂದರ್ಭಿಕ ಚಿತ್ರ

By

Published : Sep 23, 2022, 6:39 AM IST

ಕಾರವಾರ:ಸಾಮಾಜಿಕ ಜಾಲತಾಣಗಳಲ್ಲಿ ಅಪ್ರಾಪ್ತರ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿರುವ ಆರೋಪಿಗೆ 3 ತಿಂಗಳು ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಕಾರವಾರದ ಸಿಜೆಎಂ ನ್ಯಾಯಾಲಯ ತೀರ್ಪು ನೀಡಿದೆ.

ಮಹಾರಾಷ್ಟ್ರದ ನಾಗಮರದ ಬಲಿರಾಮ್ ರೌಲ್ ಎಂಬಾತ ಸೆ. 2021ರಲ್ಲಿ ಫೇಸ್‌ಬುಕ್‌ನಲ್ಲಿ ಅಪ್ರಾಪ್ತ ಮಕ್ಕಳ ಅಶ್ಲೀಲ ವಿಡಿಯೋ ಅಪ್‌ಲೋಡ್ ಮಾಡಿದ್ದನು. ಈ ಬಗ್ಗೆ ಕಾರವಾರ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಪೊಲೀಸ್ ನಿರೀಕ್ಷಕರಾಗಿದ್ದ ಸೀತಾರಾಮ್​ ಪಿ. ತನಿಖೆ ನಡೆಸಿ ಸಿಜೆಎಂ ನ್ಯಾಯಾಲಯ ಕಾರವಾರ ಅವರಿಗೆ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಸದರಿ ಪ್ರಕರಣದ ವಿಚಾರಣೆ ನಡೆಸಿದ ಸಿಜೆಎಂ ನ್ಯಾಯಾಲಯ, ಆರೋಪಿ ಬಲೆರಾಮ್ ರೌಲ್​​ಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ತನಿಖಾ ಸಹಾಯಕರಾಗಿ ಸುದರ್ಶನ್ ನಾಯ್ಕ, ಮಂಜುನಾಥ ಹೆಗಡೆ ಹಾಗೂ ಹನುಮಂತಪ್ಪ ಕಬಾಡಿ ಕರ್ತವ್ಯ ನಿರ್ವಹಿಸಿದ್ದರು. ನ್ಯಾಯಾಲಯದ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರು ಮಂಜುನಾಥ ನಾಯ್ಕ ಅವರು ಸರ್ಕಾರದ ಪರ ವಾದ ಮಂಡಿಸಿದ್ದಾರೆ.

ಇದನ್ನೂ ಓದಿ:10 ದಿನದಲ್ಲಿ ಅತ್ಯಾಚಾರಿಗೆ ಜೀವಾವಧಿ ಶಿಕ್ಷೆ: ಉತ್ತರಪ್ರದೇಶ ಪೋಕ್ಸೋ ಕೋರ್ಟ್​ ಮಹತ್ವದ ತೀರ್ಪು

ABOUT THE AUTHOR

...view details