ಕರ್ನಾಟಕ

karnataka

ETV Bharat / state

ಸರ್ಕಾರದ ವಿರುದ್ಧ ಕಾರವಾರದಲ್ಲಿ ಕಾಂಗ್ರೆಸ್​ ಪ್ರತಿಭಟನೆ - Congress Protest Against Govt

ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್​ ಕರೆ ನೀಡಿರುವ 'ಜನಧ್ವನಿ' ಆಂದೋಲನದ ಭಾಗವಾಗಿ ಕಾರವಾರದಲ್ಲಿ ಪ್ರತಿಭಟನೆ ನಡೆಯಿತು.

Karwar Congress Protest Against Govt
ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್​ನಿಂದ ಪ್ರತಿಭಟನೆ

By

Published : Aug 20, 2020, 12:57 PM IST

ಕಾರವಾರ:ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ 'ಜನಧ್ವನಿ' ಹೆಸರಿನಲ್ಲಿ ರಾಜ್ಯಾದ್ಯಂತ ಪ್ರತಿಭಟನೆಗೆ ರಾಜ್ಯ ಕಾಂಗ್ರೆಸ್ ಸಮಿತಿ ಕರೆ ಕೊಟ್ಟಿರುವ ಹಿನ್ನೆಲೆ ಕಾರವಾರದಲ್ಲೂ ಪ್ರತಿಭಟನೆ ನಡೆಯಿತು.

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನದ ಪ್ರಯುಕ್ತ ಜನಧ್ವನಿ‌ ಕಾರ್ಯಕ್ರಮವನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ಹೀಗಾಗಿ ಕಾರವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕಾರವಾರ ಕಾಂಗ್ರೆಸ್​ನಿಂದ ಪ್ರತಿಭಟನೆ

ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಜಾರಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ಸೇರಿದಂತೆ ಜನವಿರೋಧಿ ನೀತಿಗಳನ್ನು ಜಾರಿಗೆ ತರಲಾಗ್ತಿದೆ. ಕೊರೊನಾ ಭ್ರಷ್ಟಾಚಾರ ಹಾಗೂ ನೆರೆ ಪರಿಸ್ಥಿತಿ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

For All Latest Updates

ABOUT THE AUTHOR

...view details