ಕರ್ನಾಟಕ

karnataka

ETV Bharat / state

ನಗ್ನ ಚಿತ್ರಕ್ಕೆ ವಿದ್ಯಾರ್ಥಿನಿ ಮುಖ ಎಡಿಟ್ ಮಾಡಿ ಹಣಕ್ಕೆ ಬೇಡಿಕೆ: ಆರೋಪಿಗೆ 3 ವರ್ಷ ಜೈಲು, 1 ಲಕ್ಷ ದಂಡ ವಿಧಿಸಿದ ಕೋರ್ಟ್​​

ನಗ್ನ ಚಿತ್ರಕ್ಕೆ ವಿದ್ಯಾರ್ಥಿನಿಯೊಬ್ಬರ ಮುಖವನ್ನು ಎಡಿಟ್​ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗೆ ನ್ಯಾಯಾಲಯ ಶಿಕ್ಷ ವಿಧಿಸಿದೆ.

ಆರೋಪಿಗೆ ದಂಡ ವಿಧಿಸಿದ ನ್ಯಾಯಾಲಯ
ಆರೋಪಿಗೆ ದಂಡ ವಿಧಿಸಿದ ನ್ಯಾಯಾಲಯ

By

Published : Jun 17, 2023, 10:30 AM IST

ಕಾರವಾರ: ಇಸ್​ಸ್ಟಾಗ್ರಾಂ ನಕಲಿ ಖಾತೆ ಮೂಲಕ ಕಾಲೇಜು ವಿದ್ಯಾರ್ಥಿನಿ ಮುಖವನ್ನು ನಗ್ನ ಚಿತ್ರದೊಂದಿಗೆ ಎಡಿಟ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯೊಬ್ಬನಿಗೆ ಕಾರವಾರದ ಸಿಜೆಎಂ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ ದಂಡ ವಿಧಿಸಿ‌ ಆದೇಶ ಹೊರಡಿಸಿದೆ.

ಕುಮಟಾ ತಾಲೂಕಿನ ಬಾಡದ ಜೇಷ್ಠಪುರದ ಸಂಜಯ ಭಾಸ್ಕರ ನಾಯ್ಕ ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ. ಈತ 02-12-2021 ರಂದು ನಕಲಿ ಇನ್​​ಸ್ಟಾಗ್ರಾಂ ಖಾತೆ ಸೃಷ್ಟಿಸಿ ಕಾಲೇಜು ವಿದ್ಯಾರ್ಥಿನಿಯ ಇನ್​ಸ್ಟಾಗ್ರಾಂ ಖಾತೆಗೆ ನಗ್ನ ಚಿತ್ರಕ್ಕೆ ಅವಳ ಮುಖವನ್ನು ಎಡಿಟ್ ಮಾಡಿ ಆಶ್ಲೀಲ ಫೋಟೋ ಕಳುಹಿಸಿದ್ದ. ಅಲ್ಲದೇ ಪೋಟೋ ಡಿಲೀಟ್ ಮಾಡಲು 5000 ರೂಪಾಯಿ ಬೇಡಿಕೆ ಇಟ್ಟಿದ್ದ.

ಜೊತೆಗೆ ಅಥವಾ ನಗ್ನವಾಗಿ ವಿಡಿಯೋ ಕಾಲ್ ಮಾಡುವಂತೆ ಬೆದರಿಕೆ ಹಾಕಿದ ಕಾರಣ ವಿದ್ಯಾರ್ಥಿನಿಯ ಸಹೋದರ ಕಾರವಾರದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಸಿಇಎನ್ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್ ನಿತ್ಯಾನಂದ ಪಂಡಿತ ಪೊಲೀಸ ನಿರೀಕ್ಷಕರು ಆರೋಪಿತನ ವಿರುದ್ದ ಮಾಹಿತಿ ತಂತ್ರಜ್ಞಾನ ಕಾಯ್ದೆ 66(ಸಿ) 66(ಡಿ),67(ಏ) ಮತ್ತು ಭಾದಂಸಂ ಕಲಂ 384, 509, 511, 292.ರ ಅಪರಾಧದ ಕುರಿತು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಸಿಜೆಎಮ್ ನ್ಯಾಯಾಲಯವು ಆರೋಪಿ ಭಾಸ್ಕರ ನಾಯ್ಕನಿಗೆ ಮೂರು ವರ್ಷ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೇ ದಂಡದ ಪೈಕಿ ನೊಂದ ಬಾಲಕಿಗೆ 75,000 ರೂಪಾಯಿ ಪರಿಹಾರ ನೀಡಲು ಮತ್ತು 25,000 ರೂಪಾಯಿ ಸರ್ಕಾರಕ್ಕೆ ಜಮೆಮಾಡಲು ನ್ಯಾಯಾಧೀಶರಾದ ರೇಷ್ಮಾ ರೊಡ್ರಿಗ್ರೀಸ್ ಅವರು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಕಾರವಾರದ ಮಂಜುನಾಥ ಹೊನ್ನಯ್ಯ ನಾಯ್ಕ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದ್ದರು.

ಅಪ್ರಾಪ್ತೆಯ ಅಪಹರಿಸಿ ಅತ್ಯಾಚಾರ ಅಪರಾಧಿಗಳಿಗೆ 20 ವರ್ಷ ಶಿಕ್ಷೆ:ಮಂಗಳೂರಿನಲ್ಲಿ ಕೆಲದಿನಗಳ ಹಿಂದೆ ನಡೆದ ಘಟನೆಯಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯನ್ನು ರೈಲು ನಿಲ್ದಾಣದಿಂದ ಅಪಹರಿಸಿ ಅತ್ಯಾಚಾರ ಎಸಗಿದ್ದ ಇಬ್ಬರು ಅಪರಾಧಿಗಳಿಗೆ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ಎಫ್‌ಟಿಎಸ್‌ಸಿ-2 ನ್ಯಾಯಾಲ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಸಚಿನ್ ಸಂತೋಷ್ ನಾಯ್ಕ (22) ಮತ್ತು ಪ್ರವೀಣ್ ಜಯಪಾಲ್ ನಾಯ್ಕ (33) ಶಿಕ್ಷೆಗೊಳಗಾದ ಅಪರಾಧಿಗಳು.

2022ರ ಏಪ್ರಿಲ್​ 12ರ ಮಧ್ಯಾಹ್ನ 12.45ಕ್ಕೆ ಅಪ್ರಾಪ್ತೆ ರೈಲು ನಿಲ್ದಾಣದಲ್ಲಿ ಹರಿಯಾಣಕ್ಕೆ ಹೋಗಲು ಟಿಕೆಟ್ ಪಡೆಯಲೆಂದು ನಿಂತಿದ್ದಳು. ಈ ವೇಳೆ ದುರುಳರು ಆಕೆಯ ಬಳಿ ಟಿಕೆಟ್ ಮಾಡಿಸಿಕೊಡುವುದಾಗಿ ಹೇಳಿ, ಬಳಿಕ ಟಿಕೆಟ್ ಕೌಂಟರ್‌ನಲ್ಲಿ ಟಿಕೆಟ್ ಪಡೆಯುವಂತೆ ನಟಿಸಿ 'ಇಲ್ಲಿ ಟಿಕೆಟ್ ದೊರಕುವುದಿಲ್ಲ. ಕಾರವಾರದಲ್ಲಿ ಟಿಕೆಟ್ ತೆಗೆಸಿಕೊಡುತ್ತೇವೆ. ಎಂದು ನಂಬಿಸಿ ರೈಲಿನಲ್ಲಿ ಅಪ್ರಾಪ್ತಳನ್ನು ಕರೆದೊಯ್ದಿದ್ದರು.

ಬಳಿಕ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಬಳಿಕ ಏಪ್ರಿಲ್​​ 14ರಂದು ಆಕೆಯನ್ನು ಮಂಗಳೂರು ರೈಲು ನಿಲ್ದಾಣಕ್ಕೆ ಕರೆತಂದು ಬಿಟ್ಟಿದ್ದರು. ರೈಲು ನಿಲ್ದಾಣದಲ್ಲಿ ಆತಂಕದಲ್ಲಿ ಕುಳಿತಿದ್ದ ಬಾಲಕಿಯನ್ನು ಗಮನಿಸಿದ ರೈಲ್ವೆ ವಿಚಾರಿಸಿದ್ದಾರೆ‌. ಈ ವೇಳೆ ಅತ್ಯಾಚಾರ ನಡೆಸಿರುವ ಬಗ್ಗೆ ಬಾಲಕಿ ತಿಳಿಸಿದ್ದಾಳೆ. ತಕ್ಷಣ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಪೋಕ್ಸೊ ಕಾಯಿದೆಯನ್ವಯ ಇಬ್ಬರಿಗೂ ತಲಾ 20 ವರ್ಷ ಕಠಿಣ ಸಜೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿತ್ತು. ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ ಒಂದು ವರ್ಷ ಕಠಿಣ ಸಜೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿತ್ತು. ಅಲ್ಲದೆ ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಧೀಶರು ಆದೇಶಿಸಿತ್ತು.

ಇದನ್ನೂ ಓದಿ:ಅಪ್ರಾಪ್ತೆಯ ಅಪಹರಿಸಿ ಅತ್ಯಾಚಾರ: ಇಬ್ಬರಿಗೆ 20 ವರ್ಷ ಶಿಕ್ಷೆ ವಿಧಿಸಿ ಮಂಗಳೂರು ಕೋರ್ಟ್‌ ಆದೇಶ

ABOUT THE AUTHOR

...view details